
ವರ್ಷಾಚರಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಈಗಾಗಲೇ ಆದೇಶ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ರೀತಿಯಲ್ಲಿ ದೊಡ್ಡ ಪ್ರಮಾಣದ ಗುಂಪುಗಳು ಸೇರಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಆಯೋಜನೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಮದ್ಯಪಾನ ಸೇವಿಸಿ ವಾಹನ ಚಲಾಯಿಸದಂತೆ ವಿಶೇಷ ತಪಾಸಣೆ ಮಾಡಲು ಪೊಲೀಸ್ ತಂಡವನ್ನು ನಿಯೋಜನೆ ಮಾಡಲಾಗಿದೆ. ಆದ್ದರಿಂದ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡು ಹೊಸ ವರ್ಷಾಚರಣೆ ಮಾಡಬೇಕು. ಅಲ್ಲದೆ ಕೊರೊನಾ ನಿಯಮಗಳನ್ನು ಪಾಲಿಸಿ ಪಾರ್ಟಿಗಳನ್ನು ಆಯೋಜಿಸಬೇಕೆಂದರು.