Header Ads
Header Ads
Breaking News

17ನೇ ವರ್ಷದ “ಪುತ್ತೂರು ದಸರಾ ಮಹೋತ್ಸವ” ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನ

ಪುತ್ತೂರು ನಗರದ ಹೊರವಲಯದ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ ಕಳೆದ ಹನ್ನೆರಡು ದಿನಗಳಿಂದ ಗಣಪತಿ, ಶಾರದೆ ಸಹಿತ ನವದುರ್ಗೆಯರ ಪ್ರತಿಷ್ಠಾಪನೆಯೊಂದಿಗೆ ನಡೆಯುತ್ತಿದ್ದ 17ನೇ ವರ್ಷದ “ಪುತ್ತೂರು ದಸರಾ ಮಹೋತ್ಸವ” ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು.ಬೆಳಗ್ಗೆ ಕ್ಷೇತ್ರದಲ್ಲಿ ಚಂಡಿಕಾ ಹವನ ನಡೆಯಿತು. ಈ ಸಂದರ್ಭದಲ್ಲಿ ಮಹಿಳೆಯರಿಂದ ಸಾಮೂಹಿಕ ಲಲಿತ ಸಹಸ್ರನಾಮ ಪಠಣೆ ನಡೆಯಿತು. ಮಧ್ಯಾಹ್ನ ಚಂಡಿಕಾ ಹವನದ ಪೂರ್ಣಹುತಿಯಾಗಿ ಬಳಿಕ ಪ್ರಸಾದ ವಿತರಣೆ ನಡೆಯಿತು. ಚಂಡಿಕಾ ಹವನ ಸೇವೆ ಮಾಡಿಸಿದ ಭಕ್ತಾದಿಗಳಿಗೆ ಪ್ರಸಾದದೊಂದಿಗೆ ಸೀರೆಯನ್ನು ವಿತರಿಸಲಾಯಿತು. ಸಂಜೆ 4 ಗಂಟೆಗೆ ಗಣಪತಿ, ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆಗೆ ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಠಾಣಾ ಇನ್‍ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ, ನವದುರ್ಗಾರಾಧನಾ ಸಮಿತಿ ಸಂಚಾಲಕ, ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ, ಕಾರ್ಯಾಧ್ಯಕ್ಷ ರಾಜೇಶ್ ಬನ್ನೂರು, ಪ್ರಧಾನ ಕಾರ್ಯದರ್ಶಿ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ಖಜಾಂಚಿ ಉದಯಕುಮಾರ್ ರೈ, ವಿವಿಧ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *