
ದೇಶದಾದ್ಯಂತ ಕರೆ ನೀಡಿರುವ ಎರಡು ದಿನಗಳ ಬ್ಯಾಂಕ್ ನೌಕರರ ಮುಷ್ಕರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತೂ ಕೂಡಾ ನಡೆಯ್ತು. ಬಲ್ಮಠ ರಸ್ತೆಯಲ್ಲಿರೋ ಕೆನರಾ ಬ್ಯಾಂಕ್ ವೃತ್ತ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಬ್ಯಾಂಕ್ಗಳ ಖಾಸಗೀಕರಣವನ್ನು ಕೈಬಿಡುವಂತೆ ನೌಕರರು ಒತ್ತಾಯಿಸಿದರು. ಅಖಿಲ ಭಾರತ ಬ್ಯಾಂಕ್ ಅಧಿಕಾರಿ ಗಳ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ, ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ, ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ, ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಒಕ್ಕೂಟ, ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ ಸೇರಿದಂತೆ ಒಂಬತ್ತು ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.