Header Ads
Breaking News

2019ನೇ ಲೋಕಸಭಾ ಚುನಾವಣೆ ಹಿನ್ನೆಲೆ ಚೆಕ್‌ಪೋಟ್‌ಗಳಲ್ಲಿ 24 ಗಂಟೆಯೂ ತಪಾಸಣಾ ಕಾರ್ಯ!!

2019ನೇ ಲೋಕಸಭಾ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದ್ದು. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಎಲ್ಲಾ ಸಿದ್ಧತೆಯನ್ನ ಮಾಡಿಕೊಳ್ಳುತ್ತಿವೆ. ದ.ಕ. ಜಿಲ್ಲೆಯಲ್ಲಿ ಚುನಾವಣೆಯನ್ನು ಸಮರ್ಥವಾಗಿ ನಡೆಸಲು ಚುನಾವಣಾ ಆಯೋಗದ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಜನತೆಯ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಹೌದು 2019ನೇ ಲೋಕಸಭಾ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದ್ದು. ದೇಶದಾದ್ಯಂತ ಭಾರಿ ಕುತೂಹಲ ಕೆರಳಿಸಿದೆ. ಇದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯೇನು ಹೊರತಾಗಿಲ್ಲ. ಸೂಕ್ಷ್ಮ ಪ್ರದೇಶವಾಗಿರುವ ದ.ಕ. ಜಿಲ್ಲೆಯಲ್ಲಿ ಚುನಾವಣೆಯನ್ನು ಯಾವುದೇ ಗೊಂದಲಗಳಿಲ್ಲದಂತೆ ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಕಟಿಬದ್ಧವಾಗಿದೆ. ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಉಳಿದಿರುವ ಕಾರಣ ಮಂಗಳೂರು ನಗರದ ಹಲವೆಡೆ ಚೆಕ್‌ಪೋಸ್ಟ್‌ಗಳನ್ನು ನಿರ್ವಿಸಿದೆ. ನಿಯಮಗಳು ಉಲ್ಲಂಘನೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.
ಇನ್ನೂ ಈ ಬಗ್ಗೆ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾತನಾಡಿ ಶಾಂತಿಯುತ, ಪಾರದರ್ಶಕ ಚುನಾವಣೆಗೆ ಸಂಬಂಧಿಸಿ ಇಲಾಖೆ ಅನೇಕ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆ ಹಾಗೂ ಅಂತರಾಜ್ಯ ಚೆಕ್‌ಪೋಟ್‌ಗಳನ್ನು ನಿರ್ಮಿಸಿದ್ದು ದಿನದ 24 ಗಂಟೆಯೂ ತಪಾಸಣಾ ಕಾರ್ಯ ಬಿಗಿಗೊಳಿಸಲಾಗಿದೆ ಎಂದು ತಿಳಿಸಿದರು.ಒಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಚುನಾವಣೆಯನ್ನು ಯಾವುದೇ ಗೊಂದಲಗಳಿಲ್ಲದಂತೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.. ನಿಯಮಗಳು ಉಲ್ಲಂಘನೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳುವಿದಾಗಿ ಕಿಡಿಗೇಡಿಗಳಿಗೆ ಖಡಕ್ ಸಂದೇಶವನ್ನೂ ರವಾನಿಸಿದೆ.

Related posts

Leave a Reply

Your email address will not be published. Required fields are marked *