Header Ads
Header Ads
Breaking News

3 ದಿನಗಳ ರಾಜೀವ್ ಗಾಂಧಿ ಆರೋಗ್ಯ ವಿ.ವಿ ಅಂತರ್ ಕಾಲೇಜು ಅಥ್ಲೆಟಿಕ್ಸ್‌ಗೆ ಚಾಲನೆ ಉಪಕುಲಪತಿ ವಿ.ವಿ ಡಾ.ಎಂ.ಕೆ ರಮೇಶ್ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರಾಜೀವ್ ಗಾಂಧಿ ಆರೋಗ್ಯ ವಿ.ವಿ ಅಂತರ್ ಕಾಲೇಜು ಅಥ್ಲೆಟಿಕ್ಸ್‌ಗೆ ಸಾಯಂಕಾಲ ರಾಜೀವ್ ಗಾಂಧಿ ಆರೋಗ್ಯ ಉಪಕುಲಪತಿ ವಿ.ವಿ ಡಾ.ಎಂ.ಕೆ ರಮೇಶ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕ್ರೀಡೆಯು ವಿದ್ಯಾರ್ಥಿಗಳನ್ನು ಪಕ್ವಗೊಳಿಸುತ್ತದೆ. ಸೋಲು-ಗೆಲುವಿನ ಲೆಕ್ಕಾಚಾರಕ್ಕಿಂತ ಕ್ರೀಡಾಸ್ಪೂರ್ತಿಯಿಂದ ಆಡುವುದು ಮುಖ್ಯ ಎಂದರು.
ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮೂಡುಬಿದಿರೆ ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅತಿಥಿಗಳಾಗಿ ಭಾಗವಹಿಸಿದ್ದರು.

ರಾಷ್ಟ್ರೀಯ ಕ್ರೀಡಾಪಟುಗಳಾದ ಚೈತ್ರಾ ಶೆಟ್ಟಿ, ಸುಪ್ರಿತಾ, ಮಹಮ್ಮದ್ ಯಾಸಿನ್, ಸಾವಂತ್ ಸ್ವಪ್ನಿಲ್ ಅವರಿಗೆ ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಲಾಯಿತು. ಅನುಷಾ ಪ್ರತಿಜ್ಞಾವಿಧಿ ಬೋಧಿಸಿದರು.
ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಯತಿಕುಮಾರ ಸ್ವಾಮಿ ಗೌಡ ಸ್ವಾಗತಿಸಿದರು. ಗ್ರೀಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜೀವ್ ಗಾಂಧಿ ಆರೋಗ್ಯ ವಿ.ವಿ ಕ್ರೀಡಾ ಉಪ ರಿಜಿಸ್ಟರ್ ಡಾ.ಬಿ ವಸಂತ ಶೆಟ್ಟಿ,

ವರದಿ: ಪ್ರೇಮಶ್ರೀ ಮೂಡಬಿದಿರೆ