Header Ads
Breaking News

ಆಳ್ವಾಸ್‌ನಲ್ಲಿ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ

ಮೂಡುಬಿದಿರೆ: ಮಕ್ಕಳ ಜೀವನ ಯಾಂತ್ರೀಕೃತವಾಗಬಾರದು. ಬದುಕು ಎಂದರೆ ಅವರಿಗೆ ಕೇವಲ ಕಾಂಕ್ರೀಟು ಕಾಡು ಆಗಬಾರದು. ಅದರ ಬದಲು ಅವರಲ್ಲಿ ಜೀವನೋತ್ಸಾಹ ತುಂಬಲು ಪ್ರಕೃತಿಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಮಕ್ಕಳಿಗೆ ಜಲ, ಪರಿಸರದ ಬಗ್ಗೆ ಶಿಕ್ಷಣದಲ್ಲಿ ಮಾತ್ರವಲ್ಲ, ಮನೆಯಲ್ಲಿ ಕೂಡ ಪೋಷಕರು ತಿಳಿ ಹೇಳಬೇಕು. ಬೇಸಿಗೆ ಶಿಬಿರಗಳಿಂದ ಪ್ರಕೃತಿ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗಬೇಕೆಂದು ಪರಿಸರವಾದಿ ದಿನೇಶ್ ಹೊಳ್ಳ ಹೇಳಿದರು.

ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಹತ್ತು ದಿನಗಳು ನಡೆಯುವ ಚಿಣ್ಣರಮೇಳ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅತಿಥಿಗಳೆಲ್ಲರೂ ಚರ್ಮವಾದ್ಯ ನುಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಇನ್ನೋರ್ವ ಮುಖ್ಯ ಅತಿಥಿ ಕುದ್ರೋಳಿ ಗಣೇಶ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಶಿಬಿರ ಮುಖ್ಯ ಸಂಚಾಲಕ ಜೀವನ್‌ರಾಮ್ ಸುಳ್ಯ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *