
ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಸ್ವರಾಜ್ಯ ಮೈದಾನದ ಕ್ರೀಡಾಂಗಣದಲ್ಲಿ ನಡೆದ 36ನೇ ರಾಜ್ಯ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನ್ಶಿಪ್ ನಲ್ಲಿ 287 ಅಂಕಗಳೊಂದಿಗೆ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ ಸಮಗ್ರ ಚಾಂಪಿಯನ್ ಆಗಿ ಮೂಡಿಬಂದಿದೆ.
ಆಳ್ವಾಸ್ ಕ್ರೀಡಾಪಟುಗಳು 33 ಚಿನ್ನ, 29 ಬೆಳ್ಳಿ ಹಾಗೂ 35 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ 90 ಅಂಕಗಳೊಂದಿಗೆ ದ್ವಿತೀಯ ಹಾಗೂ ಮೈಸೂರು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ 84 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದೆ. ಚಾಂಪಿಯನ್ಶಿಪ್ನಲ್ಲಿ ಒಟ್ಟು 6 ಕೂಟ ದಾಖಲೆಗಳಾಗಿವೆ. ಅಂತಿಮ ದಿನ ಅಳ್ವಾಸ್ ಸ್ಪೋಟ್ರ್ಸ್ ಕ್ಲಬ್ನ ರಮ್ಯ ಶ್ರೀ ಜಾವೆಲಿನ್ ಥ್ರೋನಲ್ಲಿ 44.54 ಮೀ ದೂರ ಎಸೆದು ಹೊಸ ದಾಖಲೆ ಬರೆದರು.