Header Ads
Breaking News

45 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ ವಿತರಣೆ : ಆರೋಗ್ಯ ಸಚಿವ ಡಾ.ಸುಧಾಕರ

ಕೋವಿಡ್ ನಿರೋಧಕ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೂ ನೀಡಲು ರಾಜ್ಯದಲ್ಲಿ ಎರಡು ಸಾವಿರ ಹೆಚ್ಚುವರಿ ಲಸಿಕಾ ಕೇಂದ್ರವನ್ನು ಗುರುವಾರದಿಂದ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ.

ಅವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಲೇಡಿಗೋಷನ್, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋವಿಡ್ ನಿಯಂತ್ರಣ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ, ಸುದ್ಧಿಗಾರದೊಂದಿಗೆ ಮಾತನಾಡಿದ್ರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಎರಡನೆ ಅಲೆಯ ಕಾರಣದಿಂದ ಸೋಂಕು ನಿಯಂತ್ರಿಸಲು ಮುಖ್ಯ ಮಂತ್ರಿಯವರು ನೀಡಿದ ಸೂಚನೆಗಳನ್ನು ಪಾಲಿಸಲು ಆದೇಶ ನೀಡಲಾಗಿದೆ. ಈ ಹಿಂದೆ ಲಸಿಕೆ ನೀಡಲು 3000 ಕೇಂದ್ರಗಳಿತ್ತು. ಇದೀಗ ಹೆಚ್ಚು ವರಿಯಾಗಿ 2000 ಕೇಂದ್ರ ಗಳು ಸೇರಿ ಒಟ್ಟು 5 ಸಾವಿರ ಲಸಿಕಾ ಕೇಂದ್ರ ಗಳು ಕಾರ್ಯನಿರ್ವಹಿಸಲಿವೆ ಎಂದು ಸುಧಾಕರ್ ತಿಳಿಸಿದ್ರು. ಕೇರಳಕ್ಕೂ ದಕ್ಷಿಣ ಕನ್ನಡಕ್ಕೂ ಅವಿನಾಭಾವ ಸಂಬಂಧ. ಈ ಎರಡು ಪ್ರದೇಶಗಳ ನಡುವೆ ಹೆಚ್ಚು ಜನರು ಸಂಚರಿಸುತ್ತಾರೆ. ಆರ್ ಟಿಪಿಸಿಆರ್ ನೆಗೆಟಿವ್ ವರದಿ ಪರೀಕ್ಷಿಸಬೇಕು ಎಂಬ ಮಾರ್ಗಸೂಚಿ ನಿಯಮವೂ ಇದೆ. ಬಿಗಿಯಾದ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡುತ್ತೇನೆ ಎಂದರು.

ರಾಜ್ಯದ 250ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಪೂಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉನ್ನತ ಮಟ್ಟದ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.ಈ ಕೇಂದ್ರದ ನೂತನ ಕಟ್ಟಡ ಹಾಗೂ ಸುಸಜ್ಜಿತ ವಸತಿ ಗ್ರಹಗಳನ್ನು ನಿರ್ಮಿಸಲಾಗುವುದು ಅವರು ಹೇಳಿದರು. ಈ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *