Header Ads
Breaking News

5 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ: ಎಸ್‌ಕೆಎಸ್ಸೆಸ್ಸೆಫ್ ಬಂಟ್ವಾಳ ಕೇಂದ್ರ ಘಟಕದ ಆಶ್ರಯದಲ್ಲಿ ಆಯೋಜನೆ

ಬಂಟ್ವಾಳ: ಎಸ್‍ಕೆಎಸ್ಸೆಸ್ಸೆಫ್ ಬಂಟ್ವಾಳ ಕೇಂದ್ರ ಘಟಕದ ಆಶ್ರಯದಲ್ಲಿ ಐದನೆ ವಾರ್ಷಿಕೋತ್ಸವದ ಪ್ರಯುಕ್ತ 5 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದ ಮರ್ಹೂಂ ಅಬ್ದುಲ್ ಜಬ್ಬಾರ್ ಉಸ್ತಾದ್ ವೇದಿಕೆಯಲ್ಲಿ ಸಂಭ್ರಮದಿಂದ ನೆರವೇರಿತು. ಪಾಣಕ್ಕಾಡ್‍ನ ರಶೀದ್ ಅಲಿ ಶಿಹಾಬ್ ತಂಙಳ್ ಅವರು ದುವಾಃ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿದರು. ದ.ಕ. ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಖಾಝಿ ಅವರು ಅಧ್ಯಕ್ಷತೆ ವಹಿಸಿ, ಸಾಮೂಹಿಕ ವಿವಾಹದ ನೇತೃತ್ವ ವಹಿಸಿದ್ದರು. ಎಸ್ಕೆಎಸ್ಸೆಸ್ಸೆಫ್ ಬೆಳ್ತಂಗಡಿ ವಲಯ ಅಧ್ಯಕ್ಷ ನಝೀರ್ ಅಝ್ಹರಿ ನಿಖಾಹ್ ಕುತುಬ ನೆರವೇರಿಸಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಸಭಾಕಾರ್ಯಕ್ರಮದಲ್ಲಿ ಮಾತನಾಡಿ, ವಧುವರರಿಗೆ ಶುಭಹಾರೈಸಿದರು.  ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ಕೇಂದ್ರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಅರಬಿ ಸಭಾಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ವಕ್ಫ್ ಸಲಹಾ ಮಂಡಳಿ ಅಧ್ಯಕ್ಷ ಯು.ಕೆ. ಮೋನು ಕಣಚೂರು, ಜೆಡಿಎಸ್ ರಾಜ್ಯಕಾರ್ಯದರ್ಶಿ ಇಬ್ರಾಹಿಂ ಗೋಳಿಕಟ್ಟೆ, ಗೇರು ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *