Header Ads
Header Ads
Header Ads
Breaking News

57.79 ಕೋಟಿ ರೂ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಬಂಟ್ವಾಳದಲ್ಲಿ ಸಚಿವ ರಮಾನಾಥ್ ರೈ ಹೇಳಿಕೆ

 

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 57.79 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ರು.

ಮುಂದಿನ 30ವರ್ಷಗಳವರೆಗಿನ ಜನಸಂಖೆಯನ್ನು ಆಧರಿಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ದಿನವೊಂದಕ್ಕೆ ಒಟ್ಟು 42 ಲಕ್ಷ ಲೀಟರ್ ಕುಡಿಯುವ ನೀರು ಸಂಗ್ರಹಿಸಲಾಗುತ್ತದೆ. ನೇತ್ರಾವತಿ ನದಿ ತೀರದಲ್ಲಿ ಇಂಟೆಕ್ ವೆಲ್, ಜ್ಯಾಕ್‌ವೆಲ್, ಕನೆಕ್ಟಿಂಗ್ ಪೈಪ್‌ಲೈನ್ ಅಳವಡಿಸಲಾಗಿದ್ದು, ಜಕ್ರಿಬೆಟ್ಟುವಿನಲ್ಲಿ ಜಲಶುದ್ದೀಕರಣ ಘಟಕ ಮತ್ತು ರೇಚಕ ಸ್ಥಾವರ ನಿರ್ಮಿಸಲಾಗಿದೆ ಎಂದು ಅವ್ರು ಹೇಳಿದ್ರು.

Related posts

Leave a Reply