Header Ads
Header Ads
Breaking News

94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮ : ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮ

ಬಂಟ್ವಾಳ: ಸಮಯಕ್ಕೆ ಸರಿಯಾಗಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಸರಕಾರ ಸಮರೋಪಾದಿಯಲ್ಲಿ ಮಾಡುತ್ತಿದೆ ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಅವರು, ತಾಲೂಕು ಕಂದಾಯ ಇಲಾಖೆಯ ಆಶ್ರಯದಲ್ಲಿ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ನಡೆದ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಸರಕಾರ ಯಶಸ್ವಿಯಾಗಿ ನಿಭಾಯಿಸಿದ್ದು, ಸುಮಾರು 250 ಕೋ.ರೂ.ಗಳಲ್ಲಿ ಪ್ರತಿ ಸಂತ್ರಸ್ಥ ಕುಟುಂಬಗಳಿಗೆ 10 ಸಾವಿರ ರೂ.ಗಳ ತಕ್ಷಣದ ಪರಿಹಾರ ನೀಡಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಮಾತನಾಡಿ, ಬಂಟ್ವಾಳ ತಾಲೂಕು ಕೇಂದ್ರಕ್ಕೆ ಹೊಸ ಆಯಾಯವನ್ನು ನೀಡುವ ನಗರ ಸುಂದರೀಕರಣ ಯೋಜನೆಗೆ ಒಂದೂವರೆ ವರ್ಷಗಳ ಸತತ ಪ್ರಯತ್ನದ ಫಲವಾಗಿ ಪ್ರಸ್ತುತ ಚಾಲನೆಯ ಹಂತಕ್ಕೆ ತಲುಪಿದೆ ಎಂದರು. ವೇದಿಕೆಯಲ್ಲಿ ದ.ಕ. ಸಂಸದ ನಳಿನ್‌ಕುಮಾರ್ ಕಟೀಲು ಶಾಸಕರಾದ ಡಿ.ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ತಾಲೂಕಿನ ಸುಮಾರು 734ಮಂದಿ ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿಯಲ್ಲಿ ಹಕ್ಕುಪತ್ರ ವಿತರಿಸಲಾಯಿತು.

Related posts

Leave a Reply

Your email address will not be published. Required fields are marked *