Header Ads
Header Ads
Breaking News

94ಸಿ, ಸಿಂಗಲ್ ಸೈಟ್ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಆರ್.ವಿ.ದೇಶಪಾಂಡೆ

ದ.ಕ. ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಾಗ ಪರಿವರ್ತನೆ, 94ಸಿ, ಸಿಂಗಲ್ ಸೈಟ್ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು ಎಂದು ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್ನಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ. ಇಂದು ಕೂಡ ಸಭೆ ಕರೆಯಲಾಗಿತ್ತು. ಆದರೆ, ಚಿತ್ರನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ. ಶೀಘ್ರ ಮತ್ತೊಂದು ಸಭೆ ನಡೆಸಿ ಪರಿಹಾರ ಕ್ರಮ ಜರುಗಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply