Header Ads
Header Ads
Header Ads
Breaking News

ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಗೆ ಸಭೆಗೆ ಆಯ್ಕೆ ಬಾಕ್ಯಿಂಗ್ ಪ್ರತಿನಿಧಿಯಾಗಿ ಮೇರಿಕೋಮ್ ಆಯ್ಕೆ

 

ಐದು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮತ್ತು ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತೆ ಮೇರಿಕೋಮ್, ನವೆಂಬರ್‍ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸಭೆಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಮಿತಿ

ಪ್ರತಿನಿಧಿಯಾಗಿ ಆಯ್ಕೆಗೊಂಡಿದ್ದಾರೆ. ಈ ಗೌರವಕ್ಕೆ ಪಾತ್ರರಾದ ಭಾರತದ ಮೊಟ್ಟ ಮೊದಲ ಬಾಕ್ಸರ್ ಎಂಬ ಹೆಗ್ಗಳಿಕೆಗೂ ಮೇರಿ ಭಾಜನರಾಗಿದ್ದಾರೆ. ಲಾಸನ್ಸೆಯಲ್ಲಿ ನವೆಂಬರ್ 11 ರಿಂದ 30 ರವರೆಗೆ ನಡೆಯಲಿರುವ ೮ನೇ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಐ‌ಒಸಿಯ ಅಥ್ಲೀಟ್‌ಗಳ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಕೋಮ್ ಅವರಿಗೆ ಆಹ್ವಾನ ನೀಡಲಾಗಿದೆ. ಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ ಎ‌ಐಬಿ‌ಎ ಭಾರತದ ಬಾಕ್ಸಿಂಗ್ ಫೆಡರೇಷನ್‌ಗೆ ಆಹ್ವಾನ ಪತ್ರಿಕೆಯನ್ನು ಕಳುಹಿಸಿಕೊಟ್ಟಿದೆ.

Related posts

Leave a Reply