Header Ads
Header Ads
Breaking News

ಅತೃಪ್ತ ಶಾಸಕರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂಕೋರ್ಟ್

ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಅಸ್ತಿತ್ವ ಹಾಗೂ ಬಿಜೆಪಿಯ ಹೊಸ ಸರ್ಕಾರ ಉದಯಕ್ಕೆ ನಿರ್ಣಾಯಕವಾಗಬಲ್ಲ ನಿರ್ಣಯವನ್ನು ತೆಗೆದುಕೊಂಡಿರುವ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಮುಂದೆ ಖುದ್ದು ಹಾಜರಾಗುವಂತೆ ರೆಬೆಲ್ ಶಾಸಕರಿಗೆ ಸುಪ್ರೀಂಕೋರ್ಟ್ ನ್ಯಾಯಪೀಠವು ಮಹತ್ವದ ಆದೇಶ ನೀಡಿದೆ.
ರಾಜೀನಾಮೆ ಅಂಗೀಕಾರ ಮಾಡದೆ ವಿಳಂಬ ಮಾಡುತ್ತಿರುವ ಸ್ಪೀಕರ್ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರಿದ್ದ ನ್ಯಾಯಪೀಠವು, ಅತೃಪ್ತರ ಪರ ವಕೀಲರಾದ ಮುಕುಲ್ ರೊಹಟಗಿ ಅವರ ವಾದ ಆಲಿಸಿ, ಅಜಿ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿದೆ.
ಕ್ರಮಬದ್ಧವಾದ ರಾಜೀನಾಮೆಗಳನ್ನು ಕೂಡಾ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿಲ್ಲ, ಉಳಿದ ರಾಜೀನಾಮೆಗಳನ್ನು ತಿರಸ್ಕರಿಸಲು ಸೂಕ್ತ ಕಾರಣ ಕೂಡಾ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. 13 ಶಾಸಕರ ರಾಜೀನಾಮೆಯನ್ನು ಪರಿಶೀಲಿಸಿದ್ದು, ಈ ಪೈಕಿ 8 ಶಾಸಕರದ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದು ರಮೇಶ್ ಕುಮಾರ್ ಅವರು ಹೇಳಿರುವುದು ಭಿನ್ನಮತೀಯ ಶಾಸಕರಿಗೆ ಅಸಮಾಧಾನ ಉಂಟು ಮಾಡಿತ್ತು.

Related posts

Leave a Reply

Your email address will not be published. Required fields are marked *