

ಹಾಸನ ಜಿಲ್ಲೆ ಆಲೂರು ತಾಲೂಕು ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ ತಿಮ್ಮಯ್ಯನವರು ಚಾಲನೆ ನೀಡಿದರು.
ನಂತರ ಅವರು ಮಾತನಾಡಿ ಇಂದು ರಾಜ್ಯದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು 5ವರ್ಷ ಒಳಪಟ್ಟ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲಾಗುತ್ತದೆ. ಪಲ್ಸ್ ಪೋಲಿಯೋ ಬೂತ್ ಗಳಿಗೆ ತೆರಳಿ ತಮ್ಮ ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿಸಬೇಕಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಆಲೂರು ಪಟ್ಟಣ ಪಂಚಾಯಿತಿಯ ಸದಸ್ಯರಾದ ಸ್ನೇಕ್ ಬಾಬು ಮುಂತಾದವರು ಭಾಗವಹಿಸಿದ್ದರು.