Breaking News

ಕಳಲೆ ಕೇಶವ ಮೂರ್ತಿ, ಗೀತಾ ಮಹದೇವ ಪ್ರಸಾದ್ ಜಯಭೇರಿ, ನಂಜನಗೂಡು ಮತ್ತು ಗುಂಡ್ಲುಪೇಟೆ ಕಾಂಗ್ರೆಸ್ ತೆಕ್ಕೆಗೆ, ಬಿಜೆಪಿಗೆ ಮುಖಭಂಗ

ತೀವ್ರ ಕುತೂಹಲ ಕೆರಳಿಸಿದ್ದ ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಾದ ಗೀತಾ ಮಹದೇವ ಪ್ರಸಾದ್ ಹಾಗೂ ಕಳಲೆ ಕೇಶವ ಮೂರ್ತಿ ಅವರು ಗೆಲುವು ಸಾಧಿಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಅವರಿಗೆ ತೀವ್ರ ಮುಖಭಂಗವಾಗಿದ್ದು, ಬರೊಬ್ಬರಿ ೧೯,೨೨೮ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಈ ಚುನಾವಣೆಯಲ್ಲಿ ಶ್ರೀನಿವಾಸ ಪ್ರಸಾದ್ ಒಟ್ಟು ೫೪,೩೯೯ ಮತಗಳನ್ನು ಪೆಡೆದಿದ್ದು, ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಒಟ್ಟು ೭೭,೩೭೨ ಮತಗಳನ್ನು ಪಡೆದಿದ್ದಾರೆ. ಇದು ಬಿಜೆಪಿಯ ಯಡಿಯೂರಪ್ಪರ ಸೋಲೂ ಆಗಿದೆ.
ಇನ್ನು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಮತ್ತು ದಿವಂಗತ ಎಚ್. ಎಸ್. ಮಹದೇವ ಪ್ರಸಾದ್ ಅವರ ಪತ್ನಿ ಗೀತಾ ಮಹದೇವ ಪ್ರಸಾದ್ ಅವರು ಜಯಭೇರಿ ಭಾರಿಸಿದ್ದು, ಗೀತಾ ಅವರು ಒಟ್ಟು ೧೦,೮೭೭ ಮತಗಳ ಅಂತರದಿಂದ ಬಿಜೆಪಿಯ ನಿರಂಜನ ಕುಮಾರ್ ಅವರನ್ನು ಸೋಲಿಸಿದ್ದಾರೆ. ಗೀತಾ ಅವರು ಒಟ್ಟು ೯೦,೨೫೮ ಮತಗಳನ್ನು ಪಡೆದಿದ್ದರೆ, ಬಿಜೆಪಿಯ ನಿರಂಜನ್ ಕುಮಾರ್ ೭೯,೩೮೧ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

Related posts

Leave a Reply