Header Ads
Header Ads
Header Ads
Breaking News

ಜನವರಿ 25 ಮತ್ತು ಫೆ.4ರಂದು ಕರ್ನಾಟಕ ಬಂದ್

ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆ ಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ  ಫೆಬ್ರವರಿ 4 ರಂದು ಪ್ರಧಾನಿ  ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇನ್ನೊಂದು ಬಂದ್‌ ನಡೆಸಲು ತೀರ್ಮಾನಿಸಲಾಗಿದೆ.

ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀವ್ರ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್‌ ಅವರು ‘ಪ್ರಧಾನಿ ಅವರು ಮಹದಾಯಿ ವಿಚಾರ ಬಗೆಹರಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸಿಕೊಟ್ಟರೆ ಫೆಬ್ರವರಿ 4 ರಂದು ನಾವು ಬಂದ್‌ ಮಾಡುವುದಿಲ್ಲ . ಇಲ್ಲವಾದಲ್ಲಿ ನಾವು ಜೈಲಿಗೆ ಹೋಗಲು ಸಿದ್ದ ಎಂದರು.

 

Related posts

Leave a Reply