Header Ads
Breaking News

ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಹೃದಯಾಘಾತದಿಂದ ನಿಧನ

ಕುಂದಗೋಳ ಕ್ಷೇತ್ರದ ಶಾಸಕ ಮೈತ್ರಿ ಸರಕಾರದ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರು ತೀವೃ ಹೃದಯಾಗಾತದಿಂದ ಮೃತಪಟ್ಟಿದ್ದಾರೆ ಅವರಿಗೆ 57 ವರ್ಷ ವಯಸ್ಸಾಗಿತ್ತು. ತೀವ್ರ ಹೃದಯಾಘಾತದಿಂದ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳಿದಿದ್ದಾರೆ ಎಂದು ತಿಳಿದುಬಂದಿದೆ. ಶಿವಳ್ಳಿ ಅವರು ಸಚಿವರಾಗಿದ್ದು, ಕುಂದಗೋಳ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.1994ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಶಿವಳ್ಳಿ ಅವರು, 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಇದೀಗ ಹೆಚ್‌ಡಿಕೆ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ಸಚಿವ ಶಿವಳ್ಳಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದರು.

Related posts

Leave a Reply

Your email address will not be published. Required fields are marked *