Header Ads
Breaking News

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 848ಕ್ಕೇರಿಕೆ: ಒಂದೇ ದಿನ 54ಮಂದಿಯಲ್ಲಿ ಸೋಂಕು ಪತ್ತೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದ್ದು ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 848ಕ್ಕೇರಿಯಾಗಿದೆ. ರಾಜ್ಯದಲ್ಲಿಂದು 54 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಳಗ್ಗೆ 53 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಸಂಜೆ ವೇಳೆ ಕಲಬುರಗಿಯ ಓರ್ವ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 54 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೋನಾ ಸೋಂಕು ಪತ್ತೆಯಾದ ನಂತರ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಬೆಂಗಳೂರು ನಗರ 3, ಬೆಳಗಾವಿ 22, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ದಾವಣಗೆರೆ ತಲಾ 1, ಕಲಬುರಗಿ 4, ಶಿವಮೊಗ್ಗ 8, ಬಾಗಲಕೋಟೆಯಲ್ಲಿ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ರಾಜ್ಯದ ಒಟ್ಟು 848 ಸೋಂಕಿತರ ಪೈಕಿ 422 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 31 ಮಂದಿ ಮೃತಪಟ್ಟಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.

Related posts

Leave a Reply

Your email address will not be published. Required fields are marked *