Header Ads
Breaking News

ಅಲ್ಪಸಂಖ್ಯಾಕ ವೈದ್ಯಕೀಯ ಪ್ರವೇಶಾತಿ, ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟೀಸು

ಸ್ನಾತಕೋತ್ತರ ವೈದ್ಯಕೀಯ ವಿಭಾಗದ ಪ್ರವೇಶಾತಿ ನಿಯಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಭಾರತೀಯ ವೈದ್ಯಕೀಯ ಮಂಡಳಿಗೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್, ಎರಡು ದಿನಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಬೆಂಗಳೂರಿನ ಸೇಂಟ್ ಜಾನ್ಸ್ ಆರೋಗ್ಯ ವಿಜ್ಞಾನಗಳ ವೈದ್ಯಕೀಯ ಕಾಲೇಜು ಸಲ್ಲಿಸಿರುವ ಮೇಲ್ಮನವಿಯನ್ನು ಕೈಗೆತ್ತಿಕೊಳ್ಳಲು ಪರಾಮರ್ಶೆ ನಡೆಸಲು ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಒಳಗೊಂಡ ಪೀಠ ನಿರ್ಧರಿಸಿತು. ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕಾಲೇಜಿನ ಪ್ರವೇಶ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ ಎಂದು ಕಾಲೇಜು ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಪೀಠಕ್ಕೆ ತಿಳಿಸಿದರು.

ಕಾಲೇಜು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಗುರುವಾರದೊಳಗೆ ಸೂಕ್ತ ಪ್ರತಿಕ್ರಿಯ