Header Ads
Header Ads
Header Ads
Breaking News

ಇಂದು ಮಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅಧಿಕೃತ ಕಾರ್ಯಕ್ರಮ ಅ.2 ರಿಂದಲೇ ಮಂಗಳೂರಿನಲ್ಲಿ ಆರಂಭಗೊಳ್ಳಲಿದೆ. ಕೇರಳ ಮತ್ತು ಮಂಗಳೂರು ಪ್ರವಾಸ ಕೈಗೊಳ್ಳುತ್ತಿರುವ ಅಮಿತ್ ಷಾ ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅವರಿಗೆ ಕಾರ್ಯಕರ್ತರು ಭವ್ಯ ಸ್ವಾಗತ ಕೋರಲಿದ್ದಾರೆ. ಬಳಿಕ ವಾಹನ ರ?ಯಾಲಿ ಅವರೊಂದಿಗೆ ಕೇರಳದ ಗಡಿಭಾಗ ತಲಪಾಡಿವರೆಗೂ ತೆರಳಿ ಬೀಳ್ಕೊಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ೨ರಂದು ರಾತ್ರಿ ಕೇರಳದಲ್ಲಿ ವಾಸ್ತವ್ಯ ಹೂಡಿ, 3 ರಂದು ಅಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು. ಅದೇ ದಿನ ಪಾದಯಾತ್ರೆ ಮುಗಿಸಿ ಷಾ ಮಂಗಳೂರಿಗೆ ವಾಪಸಾಗಿ ತಂಗಲಿದ್ದಾರೆ. 4 ರಂದು ಮಂಗಳೂರಿನ ಖಾಸಗಿ ಹೋಟೆಲ್?ನಲ್ಲಿ ಬಿಜೆಪಿ ರಾಜ್ಯಮಟ್ಟದ ನಾಯಕರ ಸಭೆ ಆಯೋಜನೆಯಾಗಿದ್ದು, ಅದರಲ್ಲಿ ಷಾ ಪಾಲ್ಗೊಳ್ಳಲಿದ್ದಾರೆ. ೪ರಂದು ಸಾಯಂಕಾಲ ಟಿ‌ಎಂಎ ಪೈ ಸಭಾಂಗಣದಲ್ಲಿ ಪ್ರಬುದ್ಧರ ಸಭೆಯನ್ನೂ ಆಯೋಜಿಸಲಾಗಿದೆ ಎಂದು ವಿವರಣೆ ನೀಡಿದರು.

Related posts

Leave a Reply