Header Ads
Header Ads
Header Ads
Breaking News

ಎ‌ಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಡಿಸೆಂಬರ್ 16 ರಂದು ಅಧಿಕಾರ ಸ್ವೀಕಾರ

ನಿರೀಕ್ಷೆಯಂತೆಯೇ 132 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಮೂಲಕ ಕಳೆದೆರಡು ದಶಕಗಳಿಂದ ಕಾಂಗ್ರೆಸ್ ಪಕ್ಷವನ್ನು ಆಳಿದ್ದ ಸೋನಿಯಾ ಗಾಂಧಿ ಅವರ ಯುಗಾಂತ್ಯವಾಗಿದೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ರಾಹುಲ್ ಗಾಂಧಿ ಹೊರತು ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನೆಹರೂ, ರಾಹುಲ್ ಅವರು ಎ‌ಐಸಿಸಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ಆಂತರಿಕ ಚುನಾವಣಾ ಅಧಿಕಾರಿ ಮುಲ್ಲಪಳ್ಳಿ ರಾಮಚಂದ್ರನ್ ಅವರು ಇಂದು ಪ್ರಕಟಿಸಿದ್ದಾರೆ.

ಮುಲ್ಲಪಳ್ಳಿ ರಾಮಚಂದ್ರನ್ ಅವರು 2004 ರಿಂದ ಸಕ್ರಿಯ ರಾಜಕಾರಣದಲ್ಲಿರುವ 47 ವರ್ಷದ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಮಾಣ ಪತ್ರ ನೀಡಿದ್ದು, ರಾಹುಲ್ ಯುಗ ಆರಂಭವಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಪರವಾಗಿ ಒಟ್ಟು 89 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅವೆಲ್ಲವೂ ಸಿಂಧುವೆಂದು ಪರಿಗಣಿಸಲ್ಪಟ್ಟಿವೆ. ರಾಹುಲ್ ಗಾಂಧಿ ಅವರು ನೆರಹರೂ-ಗಾಂಧಿ ಕುಟುಂಬದಲ್ಲಿ ಈ ಹುದ್ದೆಯನ್ನು ಅಲಂಕರಿಸಿರುವ 6 ನೇ ನಾಯಕರಾಗಿದ್ದು, ಸುದೀಘ ಅವಧಿವರೆಗೆ ಕಾಂಗ್ರೆಸ್ ಆಧ್ಯಕ್ಷರೆಂಬ ಹೆಗ್ಗಳಿಕೆ ಪಡೆದಿರುವ ಸೋನಿಯಾ ಗಾಂಧಿ ಅವರು ಡಿಸೆಂಬರ್ 16 ರಂದು ಪುತ್ರನಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. 1998 ರಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

Related posts

Leave a Reply