Header Ads
Header Ads
Breaking News

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಇಂದು ರಾತ್ರಿಯಿಂದ ಮಳೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಈ ಬಗ್ಗೆ ಮಾಹಿತಿ ನೀಡಿದ್ದು, ಸಮುದ್ರ ತೀರ ಪ್ರದೇಶದಲ್ಲಿ ಚುರುಕಾದ ಮಳೆಯಾದರೆ, ಒಳನಾಡುಗಳಲ್ಲಿ ಅಲ್ಪಪ್ರಮಾಣದ ಮಳೆ ಆಗಲಿದೆ ಎನ್ನಲಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಕಡಿಮೆ ಮಟ್ಟದ ಮಳೆ ಆಗಲಿದೆ ಎನ್ನಲಾಗಿದೆ. ಮಳೆ ಇಂದು ರಾತ್ರಿಯಿಂದಲೇ ಪ್ರಾರಂಭವಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಮಳೆ ಬರದಿದ್ದರು ಇನ್ನೆರಡು ದಿನಗಳಲ್ಲಿ ಮಳೆ ಆಗುವ ಸಂಭವ ಇದೆ. ಕರ್ನಾಟಕಕ್ಕೆ ಹೋಲಿಸಿದರೆ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳಗಳಲ್ಲಿ ಭಾರಿ ಪ್ರಮಾಣದ ಮಳೆ ಆಗಲಿದೆ.ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

Leave a Reply

Your email address will not be published. Required fields are marked *