Header Ads
Header Ads
Header Ads
Breaking News

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಹಿನ್ನಲೆ ಹಲವು ಸಚಿವರಿಂದ ರಾಜೀನಾಮೆ ಪಡೆದ ಅಮಿತ್ ಶಾ

 

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಲವು ಸಚಿವರ ರಾಜೀನಾಮೆ ಪಡೆದಿದ್ದಾರೆ. ಸಂಪುಟದಿಂದ ಕೈಬಿಡುವ ಸಚಿವರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಿರುವ ಶಾ, ರಾಜಿನಾಮೆ ನೀಡುವಂತೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತಾ ಖಾತೆಯ ರಾಜ್ಯ ಸಚಿವ ರಾಜೀವ್ ಪ್ರತಾಪ್ ರೂಢಿ, ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳ ಖಾತೆ ಸಚಿವ ಕಲ್‌ರಾಜ್ ಮಿಶ್ರಾ, ಜಲಸಂಪನ್ಮೂಲ ಖಾತೆ ರಾಜ್ಯ ಸಚಿವ ಸಂಜೀವ್ ಬಾಲ್ಯಾನ್, ಉಮಾಭಾರತಿ, ಗಿರಿರಾಜ್ ಸಿಂಗ್ ಅವರನ್ನು ಸಂಪುಟದಿಂದ ಕೈ ಬಿಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಪ್ರತಾಪ್ ರುಡಿ, ಗಿರಿರಾಜ್ ಸಿಂಗ್, ಮತ್ತು ಸಂಜೀವ್ ಬಾಲ್ಯಾನ್ ಈಗಾಗಲೇ ತಮ್ಮ ರಾಜಿನಾಮೆ ಪತ್ರವನ್ನು ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ ಎನ್ ಡಿ ಎ ಸರ್ಕಾರ ನೀಡಿದ್ದ ಪ್ರಮುಖ ಭರವಸೆಗಳನ್ನು ಈಡೇರಿಸುವಲ್ಲಿ ಈ ಸಚಿವರು ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜಿನಾಮೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ,

Related posts

Leave a Reply