Header Ads
Header Ads
Header Ads
Breaking News

ಗುಜರಾತ್ ವಿಧಾನಸಭೆ ಚುನಾವಣೆ ಬಿರುಸಿನಿಂದ ಸಾಗುತ್ತಿರುವ ಮತದಾನ 89 ಕ್ಷೇತ್ರಗಳಲ್ಲಿ ಶಾಂತಿಯುತ ಮತ ಚಲಾವಣೆ

 

ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಗ್ಗೆ 8 ಗಂಟೆಗೆ ಶಾಂತಿಯುತವಾಗಿ ಆರಂಭವಾಗಿ ಬಿರುಸಿನಿಂದ ಸಾಗುತ್ತಿದೆ.

ಮೊದಲ ಹಂತದ ಚುನಾವಣೆಯಲ್ಲಿ ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಪ್ರಾಂತ್ಯಗಳಿಗೆ ಒಳಪಟ್ಟ 89  ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಸರಿಯಾಗಿ ಮತದಾನ ಆರಂಭವಾಯಿತು. ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 977 ಅಭ್ಯರ್ಥಿಗಳು ಇದ್ದಾರೆ. ಸುಮಾರು 2.12 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

ಆಳುವ ಬಿಜೆಪಿ ಐದನೇ ಬಾರಿಗೆ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಕಾಂಗ್ರೆಸ್ ತನ್ನ ಚುನಾವಣಾ ಭವಿಷ್ಯವನ್ನು ಉಜ್ವಲಗೊಳಿಸುವ ನಿರೀಕ್ಷೆ ಹೊಂದಿದೆ. ಡಿ.14 ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಿ 93 ಸೀಟುಗಳು ನಿರ್ಧರಿಸಲ್ಪಡಲಿವೆ. ಗುಜರಾತ್‌ನಲ್ಲಿ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 182. ಮತ ಎಣಿಕೆ ಕಾರ್ಯ ಡಿಸೆಂಬರ್ 18 ರಂದು ನಡೆಯಲಿದೆ.

Related posts

Leave a Reply