Header Ads
Breaking News

ಮಾ.22ರಂದು ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಯಾರದೆಲ್ಲಾ ಹೆಸರಿದೆ ಗೊತ್ತೇ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕರ್ನಾಟಕದ 20 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮಾ. 22ರಂದು ಹೊಸದಿಲ್ಲಿಯಲ್ಲಿ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ.

ಈ ನಡುವೆ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಮಾತುಕತೆಗೆ ಬೆಂಗಳೂರಿಗೆ ಕರೆಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರು, ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಾಕಣದಲ್ಲಿರುವ ಬಗ್ಗೆ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ನ ಮೈತ್ರಿ ಸರಕಾರ ಆಡಳಿತದಲ್ಲಿದೆ. ಲೋಕಸಭಾ ಚುನಾವಣೆಯಲ್ಲೂ ಒಟ್ಟಾಗಿ ಸ್ಪರ್ಧಿಸಲು ಎರಡೂ ಪಕ್ಷಗಳು ನಿರ್ಧರಿಸಿವೆ. ಅದರಂತೆ 20 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ ಎಂಟರಲ್ಲಿ ಜೆಡಿಎಸ್ ಸ್ಪರ್ಧಿಸಲು ಒಪ್ಪಂದವಾಗಿದೆ. ಮೈತ್ರಿ ಧರ್ಮವನ್ನು ಪಾಲಿಸುವುದು ನಮ್ಮ ಕರ್ತವ್ಯವಾಗಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ. ಜೆಡಿಎಸ್ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಅವರಿಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ಹಾಗೂ ಸಹಕಾರ ನೀಡಬೇಕು. ಅವರ ಪರವಾಗಿ ಪ್ರಚಾರ ನಡೆಸಿ ಗೆಲುವು ತಂದುಕೊಡಲು ಪ್ರಯತ್ನಿಸಬೇಕು ಎಂದು ರಾಜ್ಯ ನಾಯಕರು ಜಿಲ್ಲಾ ನಾಯಕರಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟದಲ್ಲಿರುವ ಜೆಡಿಎಸ್ ಪರವಾಗಿ ತಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇರಾದೆಯನ್ನು ವ್ಯಕ್ತಪಡಿಸಿದ್ದ ಪ್ರಮೋದ್ ಮಧ್ವರಾಜ್ ಅವರ ಆಸೆಗೆ ರಾಜ್ಯ ನಾಯಕರು ತಣ್ಣೀರೆರಚಿದ್ದಾರೆ ಎಂದು ತಿಳಿದುಬಂದಿದೆ.

Related posts

Leave a Reply

Your email address will not be published. Required fields are marked *