Header Ads
Header Ads
Header Ads
Breaking News

ಮಾಹಿತಿ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾದ ಕೇಂದ್ರ ಸರ್ಕಾರ ಆನ್‌ಲೈನ್‌ನಲ್ಲೇ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ

ಮಾಹಿತಿ ತಂತ್ರಜ್ಞಾನವನ್ನು ಸಾಕಷ್ಟು ಬಳಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಆನ್ ಲೈನ್ ನಲ್ಲೇ ಎಲ್ಲಾ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಿರುವುದಾಗಿ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ.

ತೈಲ ಮಾರಾಟಕ್ಕೂ ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದೇ ಎಂಬ ಬಗ್ಗೆ ಚಿಂತನೆ ನಡೆಯುತ್ತಿದೆ. ಆನ್ ಲೈನ್ ನಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ಸಂಬಂಧಿಸಿದಂತೆ ಸಾಧಕ ಬಾಧಕಗಳ ಕುರಿತು ಅಧ್ಯಯನ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.ದೇಶದಲ್ಲಿ ಸದ್ಯ ನಾಲ್ಕು ಕೋಟಿ ಗ್ರಾಹಕರಿದ್ದಾರೆ. ಆದರೆ ಕೇವಲ ಒಂದು ಲಕ್ಷ ಔಟ್ ಲೆಟ್ ಗಳು ಮಾತ್ರ ಇವೆ ಎಂದು ಪೆಟ್ರೋಲಿಯಂ ಸಚಿವರು ಮಾಹಿತಿ ನೀಡಿದ್ದಾರೆ. ಅಲ್ಲದೆ ಪೆಟ್ರೋಲಿಯಂ ಉದ್ಯಮ ವರ್ಷಕ್ಕೆ ೬.೫ಲಕ್ಷ ಕೋಟಿ ವಹಿವಾಟು ನಡೆಸುತ್ತದೆ ಎಂದು ಹೇಳಿದ್ದಾರೆ.

Related posts

Leave a Reply