Header Ads
Header Ads
Header Ads
Breaking News

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್ ಸಹಕಾರ ತೃಪ್ತಿದಾಯಕವಾಗಿಲ್ಲ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯ

 

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಸಹಕಾರ ತೃಪ್ತಿದಾಯಕವಾಗಿಲ್ಲ ಎಂದು ಅಮೆರಿಕ ಅಸಮಾಧಾನ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದಲ್ಲಿರುವ ಹಿರಿಯ ಅಧಿಕಾರಿಯೊಬ್ಬರು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಸಹಕಾರದ ಬಗ್ಗೆ ಮಾತನಾಡಿದ್ದು, ಪಾಕಿಸ್ತಾನ ತಾಲಿಬಾನ್ ಹಾಗೂ ಹಕ್ಕಾನಿ ಭಯೋತ್ಪಾದಕ ಜಾಲಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ. ಅಷ್ಟೇ ಅಲ್ಲದೇ ಇತ್ತೀಚೆಗೆ ಭಯೋತ್ಪಾದಕ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಿರುವುದು ಈ ನಿಟ್ಟಿನಲ್ಲಿ ದೊಡ್ಡ ಹಿನ್ನೆಡೆಯೇ ಆಗಿದೆ ಎಂದು ಹೇಳಿದ್ದಾರೆ.

ಹಕ್ಕಾನಿ ಜಾಲ ಪಾಕಿಸ್ತಾನದ ಒಳಗೇ ಒತ್ತೆಯಾಗಿಟ್ಟುಕೊಂಡಿದ್ದ ಕೋಲ್‌ಮನ್ ಕುಟುಂಬದ ಬಿಡುಗಡೆ ಪ್ರಕರಣ ಇಸ್ಲಾಮಾಬಾದ್ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ, ಕೋಲ್ಮನ್ ಕುಟುಂಬದ ಬಿಡುಗಡೆಗಾಗಿ ನಮ್ಮ ರಾಯಭಾರಿ ಕ್ಚೇರಿಯ ಒತ್ತಡ, ಗುಪ್ತಚರ ಇಲಾಖೆ ಸಂಸ್ಥೆಗಳ ಶ್ರಮದಿಂದ ಬಿಡುಗಡೆಯಾಗಿದೆ, ಆದರೆ ಪಾಕಿಸ್ತಾನ ಈ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ನಮಗೆ ಖಾತ್ರಿ ಇಲ್ಲ ಎಂದು ಅಮೆರಿಕ ಅಧಿಕಾರಿ ಹೇಳಿದ್ದಾರೆ. ಕೋಲ್ಮನ್ ಕುಟುಂಬ ಬಿಡುಗಡೆಯಾಗಿರುವುದರಿಂದ ನಮಗೆ ಸಂತಸವಾಗಿದೆ. ಪಾಕಿಸ್ತಾನ ತಾಲಿಬಾನ್ ಉಗ್ರ ಸಂಘಟನೆ ಹಾಗೂ ಹಕ್ಕಾನಿ ಭಯೋತ್ಪಾದಕ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದನ್ನು ಎದುರು ನೋಡುತ್ತಿದ್ದೇವೆ ಎಂದು ಅಮೆರಿಕ ಅಧಿಕಾರಿ ಹೇಳಿದ್ದಾರೆ.

Related posts

Leave a Reply