Header Ads
Header Ads
Header Ads
Breaking News

ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಶಪಥ ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ ಶಪಥ ದೂರವಾಣಿ ಮೂಲಕ ಮಾತುಕತೆ ನಡೆಸಿದ ಉಭಯ ನಾಯಕರು

ಆಂಕರ್ : ಭಯೋತ್ಪಾದನೆ ವಿರುದ್ಧ ಭಾರತ ಮತ್ತು ಅಮೆರಿಕಾ ಜಂಟಿಯಾಗಿ ಹೋರಾಟ ನಡೆಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು ಕೊಟ್ಟಿದ್ದಾರೆ ಎಂದು ಅಮೆರಿಕಾದ ಶ್ವೇತಭವನ ವರದಿ ಮಾಡಿದೆ.

ಉಭಯ ನಾಯಕರು ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಮೊನ್ನೆ ಮಂಗಳವಾರ ನ್ಯೂಯಾರ್ಕ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮೋದಿ ಸಂತಾಪ ಸೂಚಿಸಿದರು ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ.

ಮೋದಿಯವರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದ್ದಾರೆ. ಅಸುನೀಗಿದವರ ಸಂತಾಪ ಸೂಚಿಸಿದ್ದು ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಹೇಳಿದ್ದಾರೆ ಎಂದು ಹೇಳಿದೆ.

Related posts

Leave a Reply