ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಸರ್ಕಾರಿ ಬಸ್

ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ.

ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Related Posts

Leave a Reply

Your email address will not be published.