Home ಕರಾವಳಿ Archive by category ಉಡುಪಿ

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮುಂಜಾಜೆ ಬೆಂಗಳೂರಿನ ಅವರ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46

ಉಡುಪಿ ಚಿಕ್ಕಮಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ : ಕಾರ್ಕಳದಲ್ಲಿ ಸಿದ್ಧತೆ

ಕಾರ್ಕಳ: ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಕಳದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು, 1000 ಚುನಾವಣಾ ಅಧಿಕಾರಿಗಳು ನಿಯುಕ್ತಿಗೊಂಡಿದ್ದಾರೆ. 587 ಸಹಾಯಕರಿದ್ದು 57 ಬಸ್‌ಗಳು 21 ಸೆಕ್ಟರ್ ಅಧಿಕಾರಿಗಳಿದ್ದು ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಸಿದ್ಧತೆಗಳು ನಡೆದು ಪೂರ್ಣಗೊಂಡಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದರು.

ನರೇಂದ್ರ ಮೋದಿ ಒಬ್ಬ ಹಿಟ್ಲರ್: ವೀರಪ್ಪ ಮೊಯ್ಲಿ

ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೀನುಗಾರರಿಗೆ ಯಾವ ಸೌಕರ್ಯಗಳನ್ನು ಕೂಡ ಬಿಜೆಪಿ ಸರ್ಕಾರ ಕಲ್ಪಿಸಿಲ್ಲ. ಮಂಗಳೂರಿನ ಅಳಿವೆ ಬಂದರಿನಲ್ಲಿ ಹೂಳೆತ್ತುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಉಡುಪಿ,

ಬೈಂದೂರಿನಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶವು ತೆಗ್ಗರ್ಸೆಯ ಗುಡ್ಡೆಯಂಗಡಿ ಫಾರ್ಮ್ ಹೌಸ್ ನಡೆಯಿತು. ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಅವರು, ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ ಉದ್ಘಾಟಿಸಿ, ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಸಂಸತ್‌ಗೆ ಕಳುಹಿಸುವ ಕೆಲಸ ನಿಮ್ಮದು ಎಂದರು. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತದ

ಬೈಂದೂರು : ನಾರಿ ಶಕ್ತಿ ಮಹಿಳಾ ಸಮಾವೇಶ

ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ, ಮಹಿಳೆಯರ ಕಲ್ಯಾಣಕ್ಕಾಗಿ ಮೋದಿ ಸರಕಾರ ಶೇಕಡಾ 33% ಮೀಸಲಾತಿಯನ್ನು ನೀಡಿದೆ. ಯಡಿಯೂರಪ್ಪ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನಲ್ಲಿ ಶೇಕಡಾ 50% ಮೀಸಲಾತಿ ನೀಡುವುದರ ಮೂಲಕ ಮಹಿಳೆಯರ ಪರ

ಬೈಂದೂರು : ರಾಷ್ಟ್ರಭಕ್ತರ ಬಳಗ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ

ಬೈಂದೂರು : ರಾಷ್ಟ್ರಭಕ್ತರ ಬಳಗ ಬೈಂದೂರು ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ವಿಶ್ವನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಲು ಬೆಂಬಲಿಸುತ್ತೇನೆ. ಬಿಜೆಪಿಯ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್‌ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್, ಸೂಕಿ ಖಾಲ ಚಾನಾ, ಆಲೂ ತಮಾಟರಿ ಕರಿ, ಪನೀರ್ ಕೋಫ್ತಾ, ರಾಜ್ಮಾ ಕರಿ, ಸಿಂಗಾರ ಪುರಿ, ರೈಸ್ ಕೀರ್,

ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೋಪಾಲ ಪೂಜಾರಿ ಅವರ ಮಾತಿಗೆ ತಿರುಗೇಟು

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು