Home ಕರಾವಳಿ Archive by category ಉಡುಪಿ (Page 14)

ಮುಂಡ್ಕೂರು: ಮನೆಗೆ ನುಗ್ಗಿ ಬರಿಗೈಯಲ್ಲಿ ವಾಪಸ್ಸಾದ ಕಳ್ಳರು..!!

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯ ಅಲಂಗಾರು ಗುಡ್ಡೆ ಎಂಬಲ್ಲಿ ಮನೆಯ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಬರಿಗೈಯಲ್ಲೇ ವಾಪಾಸ್ಸಾಗಿದ್ದರೆ. ಅಲಂಗಾರು ಗುಡ್ಡೆಯ ಹೆಲೆನ್ ಸೆರಾವೊ ಎಂಬುವವರು ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮನೆಗೆ ಬಂದು ನೋಡುವಾಗ ಬಾಗಿಲು ತೆರೆದಿದ್ದು, ಒಳ ರೂಮಿನಲ್ಲಿದ್ದ ಕಪಾಟುಗಳನ್ನು

ಕಾರ್ಕಳ: ಬೈಕ್‍ಗೆ ಕಾರು ಢಿಕ್ಕಿ, ಬೈಕ್ ಸವಾರರಿಗೆ ಗಂಭೀರ ಗಾಯ

ಬೈಕ್‍ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಂಕಲ ಕರಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಟೈಲ್ಸ್ ಕೆಲಸ ಮಾಡುವ ಕಾರ್ಮಿಕರಾದ ತೌಶಿಪ್ ಮತ್ತು ತನ್ವೀರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿನ್ನಿಗೋಳಿ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕಾರು ಮುಂಡ್ಕೂರಿನಿಂದ ಸುರತ್ಕಲ್ ಕಡೆ ಸಾಗುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಲ್ಲಿ

ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮೋಸ – ಕಾರ್ಖಾನೆಗೆ 14 ಕೋಟಿ ರೂಪಾಯಿಗೂ ಹೆಚ್ಚು ನಷ್ಟ

ಹಂದಾಡಿ ಪಂಚಾಯತ್ ಬೈಕಾಡಿಯಲ್ಲಿರುವ ಬ್ರಹ್ಮಾವರ ಸಹಕಾರ ಸಕ್ಕರೆ ಕಾರ್ಖಾನೆಯ ಚರ ಸ್ಥಿರ ಆಸ್ತಿಗಳನ್ನು ನಾನಾ ಬಗೆಯಲ್ಲಿ ವಂಚಿಸಿ ವಿಲೇವಾರಿ ಮಾಡಿ ಕಾರ್ಖಾನೆಗೆ 14 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟು ಮಾಡಿದ ಬಿಜೆಪಿ ನಾಯಕ ಸುಪ್ರಸಾದ ಶೆಟ್ಟಿ ಸೇರಿ 18 ಮಂದಿ ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿ ಅವರ ಅರ್ಜಿ ವಜಾ ಮಾಡಿತು. ಉಡುಪಿ ಜಿಲ್ಲಾ ರೈತ ಸಂಘದ ಸತೀಶ ಕಿಣಿ ಅವರು ಈ ಮೋಸದ ಬಗೆಗೆ ಜೆಎಂಎಫ್‌ಸಿ

ಉಡುಪಿ: ಪ್ರೇತ ಆಹ್ವಾನೆಗೆ ಬೆಚ್ಚಿ ಬಿದ್ದ ಕಾರ್ಮಿಕರು..!

ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ ಬಂದು ದಾಳಿ ನಡೆಸಿದಾಗ ಸಹೋದ್ಯೋಗಿಗಳ ಎದ್ನೋ ಬಿದ್ನೋ ಎಂದು ಓಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ. ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತಿದೆ. ಮೀನು ಕಟ್ಟಿಂಗ್ ಶೆಡ್‍ನಲ್ಲಿ ಉತ್ತರ ಭಾರತದ 10 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಲ್ಲರೂ ಒಂದೇ ರೂಮಿನಲ್ಲಿ ನೆಲೆಸಿದ್ದರು. ಆದರೆ, ತಡರಾತ್ರಿ

ಉಡುಪಿ: ಎಸ್‍ಬಿಐ ಎಂಡಿ ಆಗಿ ವಿನಯ್ ಎಂ. ತೋನ್ಸೆ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಉಡುಪಿ ಜಿಲ್ಲೆಯ ವಿನಯ್ ಎಂ. ತೋನ್ಸೆಯವರು ಎಸ್‍ಬಿಐ- ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ- ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ಪಡೆದರು. ಅವರು ಉಪ ಎಂಡಿ ಆಗಿ ಇಲ್ಲಿಯ ತನಕ ಕಾರ್ಯ ನಿರ್ವಹಿಸಿದವರು. ಉಡುಪಿ ಜಿಲ್ಲೆಯಿಂದ ಈ ಹುದ್ದೆಗೇರಿದ ಮೊದಲಿಗರು ಇವರು. ವರನಟ ರಾಜಕುಮಾರ್ ಅಭಿಮಾನಿ ಹಾಗೂ ಪೂರ್ಣಚಂದ್ರ ತೇಜಸ್ವಿ ಮೊದಲಾದ ಸಾಹಿತಿಗಳ ಸಾಹಿತ್ಯಾಭಿಮಾನಿ ಆದ ವಿನಯ್ ಎಂ. ತೋನ್ಸೆ ಅಪ್ಪಟ ಕನ್ನಡ, ತುಳು

ಉಡುಪಿ: ಹತ್ಯೆ ಪ್ರಕರಣ: ಪ್ರವೀಣ್-ಅಯ್ನಾಜ್‍ಗೆ ಎಂಟು ತಿಂಗಳಿಂದ ಪರಿಚಯ: ಎಸ್ಪಿ ಡಾ. ಅರುಣ್

ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು. ಪ್ರವೀಣ್ ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್

ಉಡುಪಿ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ಪೆÇಲೀಸರು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ

ಬ್ರಹ್ಮಾವರ: ಕೃಷಿ ಗದ್ದೆಯಲ್ಲಿ ಭತ್ತದ ಕಟಾವು ಯಂತ್ರಗಳದ್ದೇ ಸದ್ದು..!

ಬ್ರಹ್ಮಾವರ : ಕರಾವಳಿಯಲ್ಲಿ ಈ ಬಾರಿ ಭತ್ತದ ಬೇಸಾಯ ಮಾಡಿದ ರೈತರಲ್ಲಿ ಕೆಲವು ಭಾಗದಲ್ಲಿ ಉತ್ತಮ ಇಳುವರಿ ಬಂದರೂ ಗದ್ದೆಯಿಂದ ಮನೆಗೆ ತರಲು ಅಕಾಲಿಕ ಮಳೆರಾಯ ತೊಂದರೆ ಕೊಟ್ಟರೂ, ದೀಪಾವಳಿಯ ಬಳಿಕ ಕಟಾವಿಗೆ ವೇಗ ಹೆಚ್ಚಿದೆ. ಬಹತೇಕ ಕೃಷಿಕರು ಕೂಲಿ ಆಳುಗಳ ಕೊರತೆಯಿಂದ ಯಾಂತ್ರಿಕೃತ ಕಟಾವಿಗೆ ಹೊಂದಿಕೊಂಡ ಕಾರಣ, ನದಿ ತೀರದ ತಗ್ಗು ಪ್ರದೇಶದ ಗದ್ದೆಯಲ್ಲಿ ನೀರು ತುಂಬಿಕೊಂಡ ಕಟಾವು ಯಂತ್ರಗಳು ಗದ್ದೆಯಲ್ಲಿ ಸಂಚರಿಸಲು ಆಗದೆ ಮತ್ತಷ್ಟು ವಿಳಂಬವಾಗಿದೆ. ಬ್ರಹ್ಮಾವರ ಭಾಗದ

ಪಡುಬಿದ್ರಿ: ಎರ್ಮಾಳಿನ ಕೋಳಿಯಂಕಕ್ಕೆ ದಾಳಿ ಮೂವರು ವಶಕ್ಕೆ

ತೆಂಕ ಎರ್ಮಾಳು ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಮೂವರು ಸಹಿತ ಏಳು ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಣಿಯೂರು ನಿವಾಸಿಗಳಾದ ಸುರೇಶ್, ಸುಕೇಶ್ ಹಾಗೂ ಕಾಪು ನಿವಾಸಿ ನಾಗೇಶ್ ಬಂಧಿತರು. ಬಹಳಷ್ಟು ಮಂದಿ ಪೊಲೀಸ್ ದಾಳಿಯ ವಿಷಯ ತಿಳಿದು ಪಲಾಯನ ಮಾಡಿದ್ದು ಅವರ ಗುರುತು ಪತ್ತೆಯಾಗಿದೆ. ಅವರನ್ನು ಶೀಘ್ರವಾಗಿ ವಶಕ್ಕೆ ಪಡೆಯಲಾಗುವುದು ಎಂಬುದಾಗಿ ಪಡುಬಿದ್ರಿ ಪೊಲೀಸರು ತಿಳಿಸಿದ್ದಾರೆ. ನಿಷೇಧವಿದ್ದರೂ ಎಲ್ಲೆಡೆ

ಅಂಗವೈಕಲ್ಯ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಅಣ್ಣ-ತಂಗಿ..!

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಆದರೆ, ಸಾಧಿಸಲು ಮನೋಬಲ ಆತ್ಮವಿಶ್ವಾಸ ದೃಢವಾದ ನಂಬಿಕೆ ಇರಬೇಕು ಎಂಬುದಕ್ಕೆ ಈ ಇಬ್ಬರು ಸಹೋದರ-ಸಹೋದರಿಯರು ಸಾಕ್ಷಿಯಾಗಿದ್ದು, ತಮ್ಮ ಸಾಧನೆ ಮೂಲಕ ಸ್ಫೂರ್ತಿ ನೀಡುತ್ತಿದ್ದಾರೆ. ಉಡುಪಿ ಮೂಲದ ಗಣೇಶ್ ಕುಲಾಲ್ ಪಂಜಿಮಾರ್ ಮತ್ತು ಅವರ ಸಹೋದರಿ ಸುಮಾ ಪಂಜಿಮಾರ್ ತಮ್ಮ ಪೇಟಿಂಗ್ ಮೂಲಕ ಸಾಧನೆ ಮಾಡುತ್ತಿದ್ದು, ಇತರರಿಗೆ ಪ್ರೇರಣೆ ನೀಡುತ್ತಿದ್ದಾರೆ. ಗಣೇಶ್ ಕುಲಾಲ್ ಪಂಜಿಮಾರ್ ಮತ್ತು ಸುಮಾ ಪಂಜಿಮಾರ್ ಇಬ್ಬರು ಮೂಳೆಗಳನ್ನು