Home ಕರಾವಳಿ Archive by category ಉಡುಪಿ (Page 3)

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು

ದುಬೈ ರಸ್ತೆ ಅಪಘಾತಕ್ಕೆ ತಾ.ಪಂ ಮಾಜಿ ಉಪಾಧ್ಯಕ್ಷೆ ಏಕೈಕ ಪುತ್ರಿ ದಾರುಣ ಸಾವು

ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ

ಉಡುಪಿ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024

ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿ ಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹ ಕರಿಸಬೇಕು ಎಂದು ನಗರದ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಹೇಳಿದ್ದಾರೆ. ಮಣಿಪಾಲದ ಪ್ರಾದೇಶಿಕ ಸಾರಿಗೆ ಕಛೇaರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿ ಯಿಂದ ಸೋಮವಾರ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸ್ತೆ

ನಂದಿಕೂರು ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ನಂದಿಕೂರಿನ ಮನೆಯೊಂದರಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ವ್ಯಕ್ತಿಯೋರ್ವರು ತಮ್ಮದೇ ಮನೆ ಜಗಲಿಯ ಮೇಲಿನ ಪಕ್ಕಾಸಿಗೆ ನೇಣು ಹಾಕಿಕೊಂಡು ಜೀವಾಂತ್ಯಗೊಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಂದಿಕೂರು ಶೆಟ್ಟಿ ಬೆಟ್ಟು ಸಾಲ್ಯಾನ್ ನಿವಾಸದ ವಾಸಿ ಶೇಖರ್ ಪೂಜಾರಿ(67), ಹೆಂಡತಿ ಅನಾರೋಗ್ಯದ ಸಮಸ್ಯೆಯಿಂದ ತನ್ನ ತಾಯಿ ಮನೆ ಕಾರ್ಕಳದ ಕಲ್ಯಾ ನೆಲ್ಲಿಗುಡ್ಡೆಯಲ್ಲಿ ವಾಸವಾಗಿದ್ದು, ಮಕ್ಕಳು ಕೂಡಾ ತಾಯಿಯೊಂದಿಗಿದ್ದರು, ನಂದಿಕೂರಿನ ಮನೆಯಲ್ಲಿ

ಪಡುಬಿದ್ರಿ : ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಈಚರ್ ಟಿಪ್ಪರೊಂದನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಮುಂಜಾನೆ ಹೆದ್ದಾರಿಯಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಪಡುಬಿದ್ರಿ ಪೊಲೀಸರು ಟಿಪ್ಪರ್ ವೊಂದನ್ನು ನಿಲ್ಲಿಸಲು ಸೂಚನೆ ನೀಡಿದರೂ ಉಡುಪಿ ಕಡೆಗೆ ವೇಗವಾಗಿ ಪರಾರಿಯಾಗಲು ಯತ್ನಿಸಿದ ಕೆ.ಎ.20-ಬಿ 1146 ನೋಂದಾಯಿತ ಸಂಖ್ಯೆಯ ಟಿಪ್ಪರನ್ನು ಬೆನ್ನಟ್ಟಿದಾಗ ಅದರ ಚಾಲಕ ಟಿಪ್ಪರನ್ನು ಎರ್ಮಾಳು ಸೇತುವೆ ಬಳಿ ನಿಲ್ಲಿಸಿ ಪರಾರಿಯಾಗಿದ್ದಾನೆ, ಟಿಪ್ಪರನ್ನು

ಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ

ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಕಾಪು: ಟೆಂಪೊ ಪಲ್ಟಿ : ಸಂಚಾರ ಅಸ್ತವ್ಯಸ್ತ

ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ. ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು,

ಉಡುಪಿ: ಕ್ಯಾನ್ಸರ್ ಬಗ್ಗೆ ಜಾಗೃತಿ, ಜಲವರ್ಣ ಕಲಾಕೃತಿ

ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಬೃಹತ್ ಜಲವರ್ಣ ಕಲಾಕೃತಿಯು ರಚನೆಗೊಂಡಿದೆ. ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ಡಾ. ರಂಜಿತಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಇಂಟರಾಕ್ಟ್ ಆವರಣದಲ್ಲಿ ಬೃಹತ್ ಜಲವರ್ಣ ಕಲಾಕೃತಿಯನ್ನು ರಚಿಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಕಲಾಕೃತಿಯನ್ನು ಅನಾವರಣಗೊಳಿಸಿದರು. ಸಮುದಾಯ ವೈದ್ಯಕೀಯ ವಿಭಾಗದ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರಿಂದ ‘ಶ್ರೀದೇವಿ ನಿಲಯ’ ಕೀಲಿ ಕೈ ಹಸ್ತಾಂತರ

ಹನುಮಗಿರಿಮೇಳ ದ ಕಲಾವಿದ  ರೂಪೇಶ್ ಆಚಾರ್ಯ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂ ಡಿರುವ  “ಶ್ರೀದೇವಿನಿಲಯ”ನೂತನ ಮನೆಯ  ಕೀಲಿಕೈ ಹಸ್ತಾಂತರವು ಕಾರ್ಯಕ್ರಮ ನಡೆಯಿತು. ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್