Home ಕರಾವಳಿ Archive by category ಪುತ್ತೂರು (Page 3)

ಪುತ್ತೂರು: ಫೆ.11ರಂದು ಯುವ ಕ್ರೀಡಾ ಸಂಭ್ರಮ-2024

ಪುತ್ತೂರು: ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024 ಫೆ.11ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು

ಪುತ್ತೂರು: ಉದ್ಯೋಗ ನೀಡುವುದಾಗಿ ವಂಚನೆ: ಮೂವರು ಆರೋಪಿಗಳ ಸೆರೆ

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್‌ ಕುಮಾರ್ ನಾಯ್ಕ(19) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಸುಬ್ರಹ್ಮಣ್ಯ: ಕುಕ್ಕೆ ದೇವಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಸರಕಾರದ ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಭೇಟಿ ನೀಡಿದರು.ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ದೇವಳದ ಅರ್ಚಕ ರಮೇಶ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಸ್ವೀಕರಿಸಿದರು.ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ಶ್ರೀ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು.ಬಳಿಕ ಆಡಳಿತ ಕಚೇರಿಗೆ ಭೇಟಿ ನೀಡಿದ ಸಚಿವರನ್ನು ಸನ್ಮಾನಿಸಿ

ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ವಿದ್ಯಾಧರ. ಎನ್

ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ 33 ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. 3 ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ದಿ. ಮಹಾಲಿಂಗ ಪಾಟಾಳಿ ಮತ್ತು ಗಿರಿಜಾ ದಂಪತಿ ಪುತ್ರನಾದ ವಿದ್ಯಾಧರ ಎನ್. ಅವರು ಪ್ರಾಥಮಿಕ ಶಿಕ್ಷಣವನ್ನು ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢಶಿಕ್ಷಣವನ್ನು ಶ್ರೀ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಪುತ್ತೂರು: ಫೆ.18ರಂದು ದ್ವಾರಕೋತ್ಸವ

ಪುತ್ತೂರು: ಪುತ್ತೂರಿನ ದ್ವಾರಕಾ ಪ್ರತಿಷ್ಠಾನದ ವತಿಯಿಂದ ದ್ವಾರಕೋತ್ಸವ-2024 ಎಂಬ ವಿಶಿಷ್ಟ ಕಾರ್ಯಕ್ರಮ ಫೆ.18ರಂದು ಮುಕ್ರಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಶ್ರೀಪತಿ ಕಲ್ಲೂರಾಯ ಉದ್ಘಾಟಿಸಲಿದ್ದಾರೆ. ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಹಿಳಾ ಶಕ್ತಿ ಪಯಣ ಹೆಚ್ಚಳ

ಮಂಗಳೂರು ಮತ್ತು ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅನುಕೂಲ ಪಡೆದು 7 ತಿಂಗಳಲ್ಲಿ ಪಯಣಿಸಿದ ಮಹಿಳೆಯರಿಗೆ 2.8 ಕೋಟಿ ಟಿಕೆಟ್ ನೀಡಿಕೆ ಆಗಿದೆ. ಈ ಟಿಕೆಟ್‌ಗಳ ಒಟ್ಟು ದರ 9.15 ಕೋಟಿ ರೂಪಾಯಿ. ಆರಂಭದ ಜೂನ್ ತಿಂಗಳಿನಲ್ಲಿ 20,87,658 ಇದ್ದ ಟಿಕೆಟ್ ನೀಡಿಕೆ ಹೆಚ್ಚುತ್ತ ಬಂದಿದ್ದು ಜನವರಿ ತಿಂಗಳಲ್ಲಿ ತಿಂಗಳು ಮುಗಿಯುವುದಕ್ಕೆ ಮೊದಲೆ 26,96,261ತಲುಪಿದೆ.

ಪುತ್ತೂರು: ಅನಾರೋಗ್ಯದಿಂದ ಪುತ್ತೂರಿನ ಯುವತಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ನೆಹರೂನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಇಂಜಿನಿಯರಿಂಗ್ ಪದವೀಧರೆಯಾಗಿದ್ದರು.ಲಿವರ್ ಸಮಸ್ಯೆಯಿಂದಾಗಿ ಐಶ್ವರ್ಯ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಬದಲಾವಣೆಯಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು

ಪುತ್ತೂರು: ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು. ಈ ರಸ್ತೆಗೆ ಸದ್ಯಕ್ಕೆ 5 ಲಕ್ಷ ಅನುದಾನ ನೀಡಿದ್ದೇನೆ. ಮುಂದೆ ಇದೇ ರಸ್ತೆಗೆ 15