Home ಕರಾವಳಿ Archive by category ಪುತ್ತೂರು (Page 4)

ಪುತ್ತೂರು: ಮಾ.7ರಂದು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಪುತ್ತೂರು: ರೈತರ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಕಳಕಳಿ ಇರುತ್ತಿದ್ದರೆ, ಇಂತಹ ದುಸ್ಥಿತಿ ಬರುತ್ತಿರಲಿಲ್ಲ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದರೂ, ಜಿಲ್ಲಾಧಿಕಾರಿಯವರು ರೈತರ ಸಭೆ ನಡೆಸಿಲ್ಲ. ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಮಾ.7ರಂದು ಮಧ್ಯಾಹ್ನ 2ರಿಂದ ಬಿಸಿರೋಡಿನಿಂದ

      ಪುತ್ತೂರು: ಉತ್ಕೃಷ್ಟ ಸಂಸ್ಕೃತಿಯ ಪ್ರತೀಕ ತುಳು ಭಾಷೆ: ವಾಮನ ಪೈ

ಪುತ್ತೂರು: ಭಾಷೆ ಮಾತ್ರವಾಗಿರದೆ ಉತ್ಕೃಷ್ಟ ಸಂಸ್ಕೃತಿಯ ಪ್ರತೀಕವಾಗಿರುವ ತುಳುವಿಗೆ ಅಪಾರ ಶಕ್ತಿಯಿದೆ. ಪ್ರಪಂಚದಲ್ಲೇ ಅತ್ಯಂತ ಹಳೆಯ ಭಾಷೆಯಾಗಿರುವ ತುಳುವಿಗೆ ಹಾಗೂ ತುಳು ಭಾಷಿಗರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗಳಿಕೆಯೊಂದಿಗೆ ವಿಶೇಷ ಗೌರವವಿದೆ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ ಪೈ ಹೇಳಿದರು. ತುಳುಕೂಟೊ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿರುವ ಎರಡು

ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಲಕ್ಷಾಂತರ ಜನರ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರ್ಯಾಂಡ್ ಆಗಿದ್ದು, ಇದೀಗ ಪುತ್ತೂರಿನಲ್ಲಿ ತನ್ನ 10ನೇ ಆಭರಣ ಶೋರೂಂ ಉದ್ಘಾಟನೆಗೊಂಡಿತು. ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಶೋರೂಂನ್ನು ಖ್ಯಾತ ನಟಿ ಪ್ರಿಯಾಮಣಿ ಅವರು ಉದ್ಘಾಟಿಸಿದರು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ವೈವಿಧ್ಯಮಯ ವಜ್ರಾಭರಣದ ಸಂಗ್ರಹವನ್ನು ಅನಾವರಣ ಮಾಡಿದರು. ಎಸ್‌ಡಿಪಿಐ ಅಧ್ಯಕ್ಷ ಹಾಜೀ ಇಬ್ರಾಹಿಂ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಜಗನ್ನಿಯಾಮಕನಾದ ಭಗವಂತನಿಗೆ ನಾವು ಪ್ರತಿಷ್ಠೆ, ಬ್ರಹ್ಮಕಲಶ ಮಾಡಲು ಸಾಧ್ಯವಿಲ್ಲ. ಹಾಗಿದ್ದರೂ ದೇವಸ್ಥಾನ ಕಟ್ಟಿ ಪ್ರತಿಷ್ಠಾದಿ ಉತ್ಸವಗಳನ್ನು ಮಾಡುವುದರ ಹಿಂದೆ ಆತ್ಮ ಸಾಕ್ಷಾತ್ಕಾರದ ಒಳಮರ್ಮವಿದೆ. ಮನುಷ್ಯ ತನ್ನ ಬದುಕು ಹಸನು ಮಾಡಿಕೊಳ್ಳಲು ಧರ್ಮದ ಹಾದಿಯಲ್ಲಿ ನಡೆಯಬೇಕು. ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕೂಡ ಧರ್ಮಜೀವನಕ್ಕೆ ಒಂದು ಮೆಟ್ಟಿಲಾಗಿ ಫಲ ನೀಡುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು

ಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾದ ನಳೀಲು ಬ್ರಹ್ಮಕಲಶೋತ್ಸವದ ವೇದಿಕೆ

ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು. ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ ಕಿರು ನಾಟಕ ನಡೆಯಿತು. ಈ ಸಂಧರ್ಭದಲ್ಲಿ ಮಣಿಕ್ಕರ ಶಾಲೆಗೆ 2 ಕೊಠಡಿಗಳನ್ನು ನಿರ್ಮಿಸಿಕೊಟ್ಟ ಹಾಗೂ ವಿವಿಧ ಯೋಜನೆಗಳಿಗೆ ಕೈ

ಪುತ್ತೂರು : ಸಂವಿಧಾನ ಜಾಗೃತಿ ಜಾಥಾ 2024

ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ 2024 ರಲ್ಲಿ ಅಕ್ಷಯ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು‌ ಸ್ವಯಂಸೇವಕರು ಭಾಗವಹಿಸಿರುತ್ತಾರೆ. ಜಾಥವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಿ ನಂತರ ಸಂವಿಧಾನದ ಕುರಿತು ಮಾಹಿತಿ ನೀಡಲಾಯಿತು. ಸಂವಿಧಾನ ಮಾಹಿತಿ ಜಾಥವು ಗ್ರಾಮ ಪಂಚಾಯಿತಿಯಿಂದ ಹೊರಟು ಸಂಪ್ಯದ ಆರಕ್ಷಕ ಠಾಣೆವರೆಗೆ ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು,

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ನೀಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ್ ಇವರಿಗೂ ಜವಾಬ್ದಾರಿಯ ಘೋಷಣಾ ಪತ್ರವನ್ನು ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯರವರು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ

ಪುತ್ತೂರು: ವ್ಯಕ್ತಿ ನಾಪತ್ತೆ

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು 6 ಅಡಿ

ಪುತ್ತೂರು: ಫೆ.11ರಂದು ಯುವ ಕ್ರೀಡಾ ಸಂಭ್ರಮ-2024

ಪುತ್ತೂರು: ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024 ಫೆ.11ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದೊಂದಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘ

ಪುತ್ತೂರು: ಉದ್ಯೋಗ ನೀಡುವುದಾಗಿ ವಂಚನೆ: ಮೂವರು ಆರೋಪಿಗಳ ಸೆರೆ

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್‌ ಕುಮಾರ್ ನಾಯ್ಕ(19) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ