Home ಕರಾವಳಿ Archive by category ಮಂಗಳೂರು (Page 22)

ಸುರತ್ಕಲ್: ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವಾರ್ಷಿಕೋತ್ಸವ ಆಚರಣೆ

ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್

ಮಂಗಳೂರು: ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ..? ಶಾಸಕ ಕಾಮತ್ ಪ್ರಶ್ನೆ

ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ.

ಮಂಗಳೂರು: ಬಿಎಂಆರ್ ಗೋಲ್ಡ್ ಸ್ಕೀಮ್ ಸೀಸನ್-4, ಬಂಪರ್ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗೋಲ್ಡ್ ಸ್ಕೀಮ್ ಸೀಸನ್-4ರ ಬಂಪರ್ ಡ್ರಾ ಕಾರ್ಯಕ್ರಮವು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಿತು. ಬಿಎಂಆರ್ ಗ್ರೂಫ್ ವತಿಯಿಂದ ಬಿಎಂಆರ್ ಗೋಲ್ಡ್ ಸ್ಕೀಮ್‍ನ ಜನತೆಗಾಗಿ ಲಕ್ಕಿ ಡ್ರಾ ಮೂಲಕ ವಿಶೇಷ ಕೊಡುಗೆಗಳನ್ನು ನೀಡಲು ಮುಂದಾಗಿದ್ದಾರೆ. ಮೊದಲನೇ ತಿಂಗಳ ಡ್ರಾ ಕಾರ್ಯಕ್ರಮವು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಿತು. ಅದೃಷ್ಟಶಾಲಿಗಳಾದ 5 ಮಂದಿಗೆ ಆಕ್ಟಿವಾ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ: ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ: ನಳಿನ್

ಕಳೆದ ಎರಡು ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯವನ್ನು ವಿಸ್ತಾರ ಮಾಡಿ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಅತ್ಯುತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ಮಾಡಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಹುರುಪು ಮೂಡಿಸಿದೆ. ಅವರ ಜತೆ ಕೆಲಸ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಮಂಗಳೂರಿನಲ್ಲಿ ಅವರು ಮಾತನಾಡಿ,

ದೀಪಾವಳಿಯ ಪ್ರಯುಕ್ತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಭರ್ಜರಿ ಆಫರ್..!

ದೀಪಾವಳಿ ಹಬ್ಬವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಅಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗಾಗಿ ದೀಪಾವಳಿ ವಿಶೇಷ ಆಫರ್ ನೀಡ್ತಾ ಇದೆ. ನ.11ರಿಂದ 14ರವರೆಗೆ ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಸಂಸ್ಥೆ ಆಕರ್ಷಕ ಕೊಡುಗೆ ನೀಡ್ತಾ ಇದೆ. ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂಗೆ 125ರೂ. ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ 5000 ಪ್ರತೀ ಕ್ಯಾರೆಟ್ ಮೇಲೆ

ಮಂಗಳೂರು: ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯ ಮರಳು ನೀತಿಯೇ ಕಾರಣ: ಹರೀಶ್ ಕುಮಾರ್

ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ್ದ ಘೋಷಣೆ ಅನುಷ್ಠಾನ ಆಗಿದೆಯೇ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಜಿಲ್ಲಾ

ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಐದು ವಾಹನಗಳು ಜಖಂ..!!

ಸುರತ್ಕಲ್‍ನ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಿದ್ದ ಸಿಮೆಂಟ್ ತುಂಬಿದ ಲಾರಿಯೊಂದು ಆಕಸ್ಮಿಕವಾಗಿ ಹಿಂದಕ್ಕೆ ಚಲಿಸಿ, ನಿಲ್ಲಿಸಿದ್ದ ನಾಲ್ಕು ಕಾರು, ಒಂದು ಬೈಕ್‍ಗೆ ಗುದ್ದಿ ಹಾನಿ ಮಾಡಿದ ಘಟನೆ ನಡೆದಿದೆ. ಸಂಜೆ ವೇಳೆಗೆ ಈ ಘಟನೆ ಸಂಭವಿಸಿದ್ದು, ಚಾಲಕ ಲಾರಿಯನ್ನು ನಿಲ್ಲಿಸಿ ಹೊರಗೆ ತೆರಳಿದ್ದ. ಏಕಾಏಕಿ ಹಿಂದಕ್ಕೆ ಚಲಿಸಿದ ಲೋಡ್ ಲಾರಿ ಡಿವೈಡರ್ ಬಳಿ ತಿರುವು ತೆಗೆದುಕೊಂಡು ಬಂದಿದೆ. ಇದರಿಂದ ಮಾರ್ಕೆಟ್ ಅಂಗಡಿಗೆ ಬಂದಿದ್ದ ಗ್ರಾಹಕರ ನಾಲ್ಕು

ಅಲೆವೂರು: ಟೆಂಪೋ ಬೈಕ್ ಡಿಕ್ಕಿ ಯುವಕ ಸಾವು

ಅಲೆವೂರು: ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಲೆವೂರು ವಿಠಲ ಸಭಾಭವನದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಗತಿ ನಗರದ ಮೊಹಮ್ಮದ್ ತನ್ಸಿಲ್ ( 28) ಮೃತ ದುರ್ದೈವಿಯಾಗಿದ್ದಾರೆ.

Mangaluru : ವಿದ್ಯುತ್ ಖಾಸಗೀಕರಣದ ವಿರುದ್ದ ಮೆಸ್ಕಾಂ ಕಚೇರಿಯೆದುರು ಪ್ರತಿಭಟನೆ

ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ,ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ

ಮಂಗಳೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ನ.10 ರಂದು ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ

ಮಂಗಳೂರು ಎ.ಬಿ.ಶೆಟ್ಟಿ ಸರ್ಕಲ್‌ನ ಪಾರಡಿಗಂ ಪ್ಲಾಜಾದಲ್ಲಿರುವ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವು ನ.10 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ್ ಕಾಮತ್ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಜಂಟಿ ನಿದೇರ್ಶಕರಾಧ ಸುದರ್ಶನ್ ಬಿ ಹೊಳ್ಳ ಅವರು