Home ಕರಾವಳಿ Archive by category ಮಂಗಳೂರು (Page 43)

ತೊಕ್ಕೊಟ್ಟಿನಲ್ಲಿ ಸರಣಿ ಕಳವು ಪ್ರಕರಣ

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್ , ಹ್ಯಾರೀಸ್ ಎಂಬವರಿಗೆ ಸೇರಿದ ಸಿಲ್ವರ್ ಸ್ಟಾರ್ ಎಂಟರ್‍ಪ್ರೈಸ್ ಸ್ಟೀಲ್

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣ

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರಂದು ಶಿಲಾನ್ಯಾಸ ನೆರವೇರಲಿದೆ.\ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ ; ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ ನಾಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ಕಳೆದ ಹಲವಾರು ದಶಕಗಳಿಂದ ಕಾರ್ಯಾಚರಿಸುತ್ತಿದ್ದು,ಸದ್ಯಕ್ಕೆ ಈ ಪಾರ್ಕ್ ತೀರಾ ಅವ್ಯವಸ್ಥೆಗಳಿಂದ ಕೂಡಿದೆ. ರಿಕ್ಷಾ ಪಾರ್ಕ್ ಬಳಿಯಲ್ಲೇ ಕಳೆದ ಒಂದು ತಿಂಗಳಿನಿಂದ ಡ್ರೈನೇಜ್ ತ್ಯಾಜ್ಯ ಹರಿದಾಡುತ್ತಿದ್ದು ದುರ್ನಾತದಿಂದ ಅಲ್ಲಿ ನಿಲ್ಲಲು

ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದ್ದು, ಈ ಬಗ್ಗೆ ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೆÇಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ನಗರದಲ್ಲಿ ನಡೆಯುತ್ತಿರುವ ಅಭಿಯಾನದ ಬಗ್ಗೆ

ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ : ಸಿಎಂ

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಭರ್ತಿಯಾಗಬೇಕಾಗಿದೆ. ಅವುಗಳಲ್ಲಿ ಮುಖ್ಯವಾಗಿ ಶಿಕ್ಷಕರ ಹುದ್ದೆ ಗಳು ಖಾಲಿ ಇವೆ. ಬಹುತೇಕವಾಗಿ ಹೊರಗುತ್ತಿಗೆ, ಗುತ್ತಿಗೆ ಆಧಾರದಲ್ಲಿ ಇಲಾಖೆಗಳಲ್ಲಿ ನೇಮಕಾತಿ ನಡೆಯುವುದರಿಂದ ಮೀಸಲಾತಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದ.ಕ. ಜಿಲ್ಲಾ

ಕ್ರಿಮಿನಲ್‍ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ, ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ ಎಂದು

ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಮಳೆ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡಿ ಸಭೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣದ ಬಗ್ಗೆ ಮಾತನಾಡಿದ ಅವರು ಕೇಸ್ ಸಂಬಂಧ ಮಾಹಿತಿ ಪಡೆಯುತ್ತೇನೆ. ಈಗಾಗಲೇ ಎಫ್‍ಐಆರ್ ಆಗಿದೆ, ಡಿಸಿಪಿ

ಪಚ್ಚನಾಡಿ ದೇವಿನಗರದಲ್ಲಿ ಬಹಳ ಅದ್ದೂರಿಯಿಂದ ನಡೆದ SRR ವಾಲಿಬಾಲ್ 2K23 ಪಂದ್ಯಾಕೂಟ

ಮಂಗಳೂರು ನಗರದ ಪಚ್ಚನಾಡಿ ದೇವಿನಗರದಲ್ಲಿ ದಿನಾಂಕ 30/07/2023 ರ ಆದಿತ್ಯವಾರ ಶ್ರೀ ರಾಜರಾಜೇಶ್ವರಿ ಈವೆಂಟ್ಸ್ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್(ರಿ) ಪಚ್ಚನಾಡಿ ಇವರ ನೇತೃತ್ವದಲ್ಲಿ SRR Tropy 2K23 ಸ್ಥಳೀಯ ಮಟ್ಟದ ವಾಲಿಬಾಲ್ ಪಂದ್ಯಾಕೂಟವು ಬಹಳ ವಿಜೃಂಭಣೆಯಿಂದ ಪಚ್ಚನಾಡಿ ದೇವಿನಗರದ ಕೇಂದ್ರ ಮೈದಾನದಲ್ಲಿ ನೆರವೇರಿತು. . ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀ ಸತೀಶ್ ಬಂದಲೆ ( ಧರ್ಮದರ್ಶಿಗಳು ಶ್ರೀಮಂತ ರಾಜ ಗುಳಿಗ ಕ್ಷೇತ್ರ ಹಾಗೂ ತುಳು ರಂಗಭೂಮಿ

ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆ.26ರಂದು ಉದ್ಯೋಗ ಮೇಳ

ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು, ಬಿಇಡಬ್ಲ್ಯುಎಸ್ ಯುವವಾಹಿನಿ ಕೇಂದ್ರ ಸಮಿತಿ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವು ಆಗಸ್ಟ್ ೨೬ರಂದು ನಡೆಯಲಿದೆ.ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಆಗಸ್ಟ್ 26ರಂದು ನಡೆಯಲಿದೆ. ದೇಶದ ವಿವಿಧ ಕಡೆಗಳಿಂದ ಪ್ರತಿಷ್ಠಿತ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸಲಿದೆ. ಉದ್ಯೋಗ ಮೇಳವನ್ನು ಬಿಎಸ್‌ಡಬ್ಲ್ಯುಎಸ್ ಮಂಗಳೂರಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಉದ್ಘಾಟಿಸಲಿದ್ದಾರೆ. ಯುವವಾಹಿನಿ

ಕರ್ನಾಟಕದಲ್ಲಿ “ಮದ್ರಾಸ್ ಐ” ರೋಗದ ಆತಂಕ

ಕರ್ನಾಟಕದಲ್ಲಿ ಪಿಂಕ್ ಐ, ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದ್ದು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮದ್ರಾಸ್ ಐ ರೋಗ ಹೆಚ್ಚಾಗಿ ಇರುವುದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಇನ್ನು ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ