Home ಕರಾವಳಿ Archive by category ಸುಳ್ಯ (Page 5)

ಕಡಬ: ದರ್ಗಾಕ್ಕೆ ನುಗ್ಗಿ ಹಣ ಕಳವು ಮಾಡಿದ ಕಳ್ಳರು

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ 10-12-2023 ರಿಂದ 24-12-2023 ರ ವರೆಗೆ ಚಂಪಾಷಷ್ಠಿ ಮಹೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಚಂಪಾಷಷ್ಠಿ ಮಹೋತ್ಸವವು ನಡೆಯಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ಈ ಕೆಳಗಿನ ವಿವರದಂತೆ ವಾರ್ಷಿಕ ಜಾತ್ರಾ ಉತ್ಸವಾದಿಗಳು ನಡೆಯಲಿದೆ. ಭಗವತ್ಸಂಕಲ್ಪ ಪ್ರಕಾರ ನಡೆಯತಕ್ಕ ಈ ಮಹೋತ್ಸವಗಳಿಗೆ ಭಕ್ತರು

ಕಡಬ : ನಾಳೆ ಒಕ್ಕಲಿಗ ಗೌಡ ಸಂಘದ ಪೂರ್ವಭಾವಿ ಸಭೆ

ಕಡಬ :ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ಪದಗ್ರಹಣ ಕಾರ್ಯಕ್ರಮ, ಸುಸಜ್ಜಿತ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಸ್ಪಂದನ ಸಮುದಾಯ ಸಹಕಾರ ಸಂಘ (ರಿ.) ಕಡಬ ಇದರ ಉದ್ಘಾಟನಾ ಕಾರ್ಯಕ್ರಮವನ್ನು 2023ರ ಡಿಸೆಂಬರ್ 26ರಂದು ಕಡಬದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯೊಂದಿಗೆ ಸಮಾರಂಭ ನಡೆಯಲಿದೆ. ಈ ಸಮಾರಂಭದ ಬಗ್ಗೆ

ನೆಲ್ಯಾಡಿ: ಕೊಕ್ಕಡ ಮಾಯಿಲಕೋಟೆಯಲ್ಲಿ ಕಳ್ಳತನ

ನೆಲ್ಯಾಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಾಯಿಲಕೋಟೆ ದೇವಸ್ಥಾನಕ್ಕೆ ನ.10ರಂದು ಮಧ್ಯಾಹ್ನ ಸುಮಾರು 2:30 ಗಂಟೆ ಸಮಯಕ್ಕೆ ಕಳ್ಳತನ ನಡೆದಿದೆ. ಒಂದು ತಿಂಗಳ ಹಿಂದೆ ಇಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದಲ್ಲಿ ಕಳ್ಳತನ ಮಾಡಿದವರ ಬಗ್ಗೆ ಒಂದು ತಿಂಗಳೊಳಗೆ ಸುಳಿವು ಸಿಗುವಂತೆ ಪ್ರಾರ್ಥಿಸಲಾಗಿತ್ತು. ನ.10ರಂದು ಮಧ್ಯಾಹ್ನದ ವೇಳೆ ಕಳ್ಳರು ಕಳ್ಳತನ ಮಾಡುತ್ತಿದ್ದ ಸಂದರ್ಭದಲ್ಲಿ ದೊಡ್ಡದಾದ ಶಬ್ದವೊಂದು ಕೇಳಿಸಿದ್ದು ಪರಿಸರದ ಜನರೆಲ್ಲ ಒಟ್ಟಾಗಿ

ಕಡಬ : ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಅವನಿ ಪಿ ಬಿ ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಡಬ :ಉಡುಪಿ ಅಜ್ಜರಕಾಡು ಸ್ಟೇಡಿಯಂ ಇಲ್ಲಿ ನಡೆದ 14 ರ ವಯಮಾನದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅವನಿ ಪಿ. ಬಿ. ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 4*100 ಮೀಟರ್ ರೀಲೆ ಯಲ್ಲಿ ರಿಲೇ ತಂಡದ ವಿದ್ಯಾರ್ಥಿಗಳಾದ ಕುಮಾರಿ ಫಿದಾ , ತೀಕ್ಷಾ,ಅವನಿ , ಧ್ರತಿ ಇವರು ಬೆಳ್ಳಿಯ ಪದಕ ಗಳಿಸಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ವಂದನೀಯ ಫಾದರ್ ಪೌಲ್

ಕಡಬದಲ್ಲಿ ಸಾರ್ವಜನಿಕರಿಂದ ಜಿಲ್ಲಾಧಿಕಾರಿಗೆ ಮನವಿ

ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ ತಡವಾಗಿರುವುದರಿಂದ ಕಡಬದ ಕಾರ್ಯಕ್ರಮ ರದ್ದು ಗೊಳಿಸಿದ್ದರು. ಜಿಲ್ಲಾಧಿಕಾರಿಯವರ ಕಾರು ಕಡಬಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ ಮನವಿ ಸಲ್ಲಿಸಿದರು. ಸಾರ್ವಜನಿಕರ

ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಡಿ.ವಿ. ಸದಾನಂದ ಗೌಡ

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ

ಸುಳ್ಯ : ಸುಳ್ಯ ಪೇಟೆಯಲ್ಲಿ ಮಳೆಗೆ ಧರೆಗುರುಳಿದ ಟ್ರಾನ್ಸ್ ಫಾರ್ಮರ್

ಸುಳ್ಯ ಪೇಟೆಯಲ್ಲಿ ಭಾರಿ ಮಳೆಗೆ ಭೂಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರೆಗುರುಳಿರುವ ಘಟನೆ ನಡೆದಿದೆ ಸುಳ್ಯ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದು ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರಾಶಾಹಿಯಾಗಿರುವ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ.

ಕಡಬ: ಸಂಪೂರ್ಣ ಹದಗೆಟ್ಟ ನೆಲ್ಯಾಡಿ-ಪಡುಬೆಟ್ಟು ರಸ್ತೆ: ಕೆಸರು ತುಂಬಿದ ರಸ್ತೆ, ವಾಹನ ಸವಾರರ ಪರದಾಟ

ಕಡಬದ ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಕೆಸರು ತುಂಬಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಕಷ್ಟ ಅನುಭವಿಸುತ್ತಿದ್ದಾರೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಂಚಾಯತ್ ವತಿಯಿಂದ ಮಣ್ಣುಹಾಕಿ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನಸಾಮಾನ್ಯರು ಹಾಗೂ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು

ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ

ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.