Home Archive by category ಕರಾವಳಿ (Page 61)

ಉಳ್ಳಾಲ: ಹರಕೆಯ ಕೋಲ ನೀಡಿದ ‘ಕೊರಗಜ್ಜ’ ಚಿತ್ರ ತಂಡ

ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ

ಬಂಟ್ವಾಳ: ಲಯನ್ಸ್ ಪ್ರಾಂತೀಯ ಸಮ್ಮಿಲನ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಮಾತನಾಡಿ ಸಮ್ಮಿಲನದ ಯಶಸ್ಸಿಗೆ ಸಹಕಾರ ಕೋರಿದರು. ಸಮ್ಮಿಲನ

ಬಂಟ್ವಾಳ: ಸಂಗಬೆಟ್ಟು ಬಾಕಿಮಾರು ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ಕಟ್ಟದ ಶಿಲಾನ್ಯಾಸ ಕಾರ್ಯಕ್ರಮವು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರ ಉಪಸ್ಥಿತಿಯಲ್ಲಿ ಇತ್ತೀಚಿಗೆ ಜರಗಿತು. ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕರಾದ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು.ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಸಿದ್ದಕಟ್ಟೆಹಾಲು ಉತ್ಪಾದಕ ಸಹಕಾರಿ

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಸಹಿಸಂಗ್ರಹ ಚಳುವಳಿ

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು,ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಬೇಕೆಂಬ CITU ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಇಂದು ದೇಶಾದ್ಯಂತ ಸಹಿಸಂಗ್ರಹ ಚಳುವಳಿಗೆ ಚಾಲನೆ

ಮೂಡುಬಿದಿರೆ: ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : ಆಳ್ವಾಸ್ ನ ಉಷಾಗೆ ಬೆಳ್ಳಿ ಪದಕ

ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್.‌ ಆರ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ ಎತ್ತಿದ್ದಾರೆ. ಕರ್ನಾಟಕ ರಾಜ್ಯ ದಾಖಲೆ ಆಗಿದೆ. 87 ಕೆ.ಜಿ ತೂಕದ ವಿಭಾಗದಲ್ಲಿ ಸ್ವರ್ಧಿಸಿದ್ದರು.

ಮೂಡುಬಿದಿರೆ: ಅಂಚೆ ಪಾಲಕ ಅಶೋಕ್ ವಿರುದ್ಧ ವಂಚನೆ ದೂರು ದಾಖಲು

ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ ಮತ್ತು 4 ಗ್ರಾಹಕರ ವಿವಿಧ ವಿಮಾ ಪಾಲಿಸಿಗಳ ಸುಮಾರು 13.50 ಲಕ್ಷ ಹಣವನ್ನು

ಬಂಟ್ವಾಳ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದು ಸ್ವೀಕರಿಸಿದರು. ತಾಲೂಕು ಬಂಟರ

ಬೆಳ್ತಂಗಡಿ: ಬಜಿರೆ ಹೊಸಪಟ್ಣ ಶಾಲೆಯಲ್ಲಿ ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನ

ಬೆಳ್ತಂಗಡಿ: ತಾಲೂಕಿನ ಬಜಿರೆ ಗ್ರಾಮದ ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 265ನೇ ಕಾರ್ಯಕ್ರಮವಾಗಿ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗಾಗಿ ಸಸ್ಯರಾಶಿಗಳ ಮಹತ್ವ ಎಂಬ ಘೋಷಣೆಯಡಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಮಕ್ಕಳೊಂದಿಗೆ ಸಂವಾದ ನಡೆಸಿ ಪಕ್ಷಿ ಸಂಕುಲಗಳ ಉಳಿವಿನ ಮಹತ್ವದ ಬಗ್ಗೆ ಮನವರಿಕೆ ಮಾಡಿದರು. ಶಿಕ್ಷಕಿಯರು, ಮಕ್ಕಳು

ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024: ಜ.17ರಿಂದ 21ರ ವರೆಗೆ ಕ್ರಿಕೆಟ್: ಹರಾಜು ಪ್ರಕ್ರಿಯೆ

ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಹರಾಜು ಪ್ರಕ್ರಿಯೆ ಕೃಷ್ಣಾಪುರದ ಎಮ್‌ಜೆಎಮ್ ಹಾಲ್‌ನಲ್ಲಿ ನಡೆಯಿತು. ಜನವರಿ 12 ರಿಂದ 21ರ ವರೆಗೆ 32ತಂಡಗಳ ಮದ್ಯೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವು ಕೃಷ್ಣಾಪುರದ ಪ್ಯಾರಡೈಸ್ ಮೈದಾನದಲ್ಲಿ ನಡೆಯಲಿದ್ದು, ಅದರ ಬಿಡ್ಡಿಂಗ್ ಪ್ರಕ್ರಿಯೆಯು ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಮಾತನಾಡಿ,

ಮಹಾರಾಷ್ಟ್ರ: ಏಕನಾಥರದೇ ನಿಜವಾದ ಶಿವಸೇನೆ: ಸ್ಪೀಕರ್ ನಾರ್ವೇಕರ್‌ರ ವಿವಾದ ತೆರೆದ ತೀರ್ಪು

ಮಹಾರಾಷ್ಟ್ರ ವಿಧಾನ ಸಭೆಯ ಸಭಾಪತಿ ರಾಹುಲ್ ನಾರ್ವೇಕರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆಯವರ ಬಣವೇ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು. ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜೀ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೇಳಿದರು. ಬಿಜೆಪಿ ಪರ ಶಿವಸೇನೆಯನ್ನು ಒಡೆದು ಏಕನಾಥ ಶಿಂಧೆ ಮುಖ್ಯಮಂತ್ರಿ ಆದವರು. ಆಗ ಮಹಾ ಅಘಾಡಿ ಮೈತ್ರಿ ಸರಕಾರವನ್ನು ಬೀಳಿಸಲಾಗಿತ್ತು. ಉದ್ಧವ್ ಠಾಕ್ರೆಯವರ ಬಣ ಪಕ್ಷ ಬಿಟ್ಟ ಶಾಸಕರನ್ನು ಅನರ್ಹ ಗೊಳಿಸುವಂತೆ