Home Archive by category ಕ್ರೈಮ್ (Page 5)

ಪಿಕಪ್ ಕಳವು: ಅಂತರಾಜ್ಯ ವಾಹನ ಚೋರನ ಬಂಧನ

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ

ಕೋಳಿ ಪದಾರ್ಥಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಮೊಗ್ರ ಏರಣ ಗುಡ್ಡೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ಕೋಳಿ ಪದಾರ್ಥಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ ಮಗ ಶಿವರಾಮ ಎಂಬವರಿಗೂ ಮಂಗಳವಾರ ತಡರಾತ್ರಿ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ

ಗುಂಡ್ಯ ಹಿಟ್ ಅಂಡ್ ರನ್; ವ್ಯಕ್ತಿ ಸಾವು

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(ವ.50) ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿಯು ಮೂಲತಃ ಕೇರಳದವನಾಗಿದ್ದು, ಕಳೆದ 15 ವರ್ಷದಿಂದ

ಲಾಡ್ಜ್‌ನಲ್ಲಿಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಕೆಎಸ್ ರಾವ್ ರೋಡ್ ಬಳಿ ಇರುವ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೈಸೂರು ಮೂಲದ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48) , ಪತ್ನಿ ಮತ್ತು ಇಬ್ಬರು ಹೆಣ್ಣಕ್ಕಳು ಆತ್ಮಹತ್ಯೆ ಮಾಡಿಕೊಂಡರು. ಮಾರ್ಚ್ 27ಕ್ಕೆ ಮಂಗಳೂರಿನ ಹೊಟೇಲ್ ನಲ್ಲಿ ರೂಮ್ ಪಡೆದುಕೊಂಡಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂದರು ಪೊಲೀಸರು

ಕೋಟೆಕಾರಿನಿಂದ ಕಳವಾದ ಬೈಕ್ ಮಂಗಳೂರಿನಲ್ಲಿ ಪತ್ತೆ, ಮೂವರು ಪೊಲೀಸರ ವಶಕ್ಕೆ

ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ

ನೆಲ್ಯಾಡಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿ ತಾಯಿ ಮೃತ್ಯು – ತಂದೆ, ಮಗ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(ವ.50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ನೇಣಿಗೆ ಶರಣು

ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ ನಿವಾಸಿ ಚಂದ್ರಶೇಖರ ಭಟ್ ಎಂಬವರ ಪತ್ನಿ ಕುಸುಮಾ( 49 ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಮನೆಯಲ್ಲಿ ಮಹಿಳೆಯ ಗರ್ಭಿಣಿ ಮಗಳು ಇದ್ದು ಅವರು ಮಲಗಿದ್ದರು. ಬೆಳಿಗ್ಗೆ 8.30ರ ವೇಳೆಗೆ ಮಗಳು

ಉಳ್ಳಾಲ : ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ : ಹೆಡೆಮುರಿ ಕಟ್ಟಿದ್ದ ಪೊಲೀಸರು

ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ;ಉಳ್ಳಾಲ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ,ಬೈಕ್,ಐಫೋನ್ ಎಗರಿಸಿದವರ ಬಂಧನ.ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ

ಬಂಟ್ವಾಳ : ಮಹಿಳೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪತಿ ಮನವಿ

ಬಂಟ್ವಾಳ: ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಇಲ್ಲಿನ ನಿವಾಸಿ ಸತೀಶ್ ಪಿ. ಎಂಬವರ ಪತ್ನಿ ಬೀನಾ ಸಿ.

ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಸಾವು

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು ೨೦ ರಷ್ಟು ನೆಂಟರು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ