Home Archive by category ರಾಷ್ಟ್ರೀಯ (Page 11)

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ನವೆಂಬರ್ 7

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ ಮಹತ್ವ ಮತ್ತು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ.

ಕೇರಳ : ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ, ಪೊಲೀಸರು, ಅಗ್ನಿಶಾಮಕ ದಳ ಹಾಗೂ ಆರೋಗ್ಯ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟು ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಸಚಿವ

ಯುಎಇ: ಸಪ್ಟೆಂಬರ್ 24 ರಂದು ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ

ಬಹು ನಿರೀಕ್ಷೆಯ ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಯುಎಇಯ ಅಜ್ಮಾನ್ ನ ಇಂಡಿಯನ್ ಅಸೋಸಿಯೇಷನ್ ಸಭಾಂಗಣದಲ್ಲಿ ಸಪ್ಟೆಂಬರ್ 24 ರಂದು ಜರಗಲಿದೆ. ಮಾರ್ಗದೀಪ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುಎಇಯ ವತಿಯಿಂದ ನಡೆಯುವ ಒಂಬತ್ತನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ವೇದಿಕೆಯಲ್ಲಿ ಮಧ್ಯಾಹ್ನ 12.30 ಕ್ಕೆ ಟಿಕೆಟ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಫೆಮಿನಾ ಮಿಸ್ ಇಂಡಿಯಾ ಗೋವಾ 2019 ಶಾಸ್ತ್ರ ಶೆಟ್ಟಿ ಇವರು

ಬುಡಾಪೆಸ್ಟ್: ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾಗೆ ಚಿನ್ನ

ವಿಶ್ವ ಆತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ವಿಶ್ವ ಆತ್ಲೆಟಿಕ್ಸ್‍ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ. ರವಿವಾರ ರಾತ್ರಿ ನಡೆದ ಫೈನಲ್‍ನಲ್ಲಿ ನೀರಜ್ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದರು. ಪಾಕಿಸ್ಥಾನದ ಅರ್ಷದ್ ನದೀಮ್ 87.82 ಮೀ. ದೂರಕ್ಕೆ ಎಸೆದು ದ್ವಿತೀಯ

ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ

ಇಸ್ರೊದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಹೊರಬಂದ ರೋವರ್ ತನ್ನ ಕಾರ್ಯ ಆರಂಭಿಸಿದೆ. ವಿಕ್ರಮ್ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಚಂದಿರನ ಅಂಗಳದ ಮೇಲೆ ಚಂದ್ರಯಾನ-3 ಯೋಜನೆಯ ಪ್ರಗ್ಯಾನ್ ರೋವರ್ ಉರುಳುತ್ತಿರುವ ಚಿತ್ರವನ್ನು ಭಾರತೀಯ

ಚಂದ್ರಯಾನ 3ರ ಯಶಸ್ವಿಗಾಗಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ಪ್ರಾರ್ಥನೆ

ಭಾರತೀಯರ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಪ್ರಮುಖರಾದ ಎಂ. ಗೋಪಾಲಕೃಷ್ಣ ಭಟ್, ಸಚಿನ್ ಶೆಣೈ, ಡಾ. ಮುರಳೀಕೃಷ್ಣ ರೈ, ಮಹೇಶ ನಿಟಿಲಾಪುರ, ಆಶೋಕ ಕುಂಬ್ಲೆ, ಶ್ರೀಧರ

ಭಾರತದ 508 ರೈಲು ನಿಲ್ದಾಣ ಪುನರಾಭಿವೃದ್ಧಿ: ಪ್ರಧಾನಿ ಮೋದಿ ಚಾಲನೆ

ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು.   ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,

ಪ್ರಧಾನಿಯವರನ್ನು ಭೇಟಿಯಾದ ಸಿಎಂ ಸಿದ್ಧರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಅವರನ್ನು ಭೇಟಿಯಾದರು ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.

ಇಸ್ರೋ ಚಂದ್ರಯಾನ-3 ನೌಕೆ ಉಡಾವಣೆ ಯಶಸ್ವಿ

ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್​, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್​​-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3 ಯೋಜನೆಗೆ 630 ಕೋಟಿ ರೂ. ಆಗಿರುವ ವೆಚ್ಚ ತಗುಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ ಅಂತ್ಯದ ವೇಳೆಗೆ ಚಂದ್ರಯಾನ -3 ಮಿಷನ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ

ಸಜೀಲಾ ಕೋಲಾ ಅವರಿಗೆ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ:ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ ಮೊಹಮ್ಮದ್ ನಾಗಮಾನ್ ಲತೀಫ್ ನಿರ್ಮಿಸಿದ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 2023 ರಲ್ಲಿ ನಡೆದ ಇತ್ತೀಚಿನ ಈವೆಂಟ್‌ನಲ್ಲಿ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ. ಫ್ಯಾಶನ್‌ನಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕರ್ನಾಟಕದ ಮೊದಲ ಮಹಿಳೆ. ಸಜೀಲಾ ಕೋಲಾ ಮೂರು ದಶಕಗಳಿಂದ ಫ್ಯಾಷನ್ ಉದ್ಯಮದ ಅವಿಭಾಜ್ಯ