Home ಕರಾವಳಿ Archive by category ಮಂಗಳೂರು (Page 2)

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ ಪುರಸ್ಕಾರ

ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು

ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ

ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.‌ಧರ್ಮ ಹಾಗೂ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಇವರು

ಎಸ್‌ಸಿಡಿಸಿಸಿ ಬ್ಯಾಂಕ್ 79.09 ಕೋಟಿ ರೂ. ಸಾರ್ವಕಾಲಿಕ ದಾಖಲೆ ಲಾಭ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬ್ಯಾಂಕ್‌ನ

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ

ರಾಜಕೀಯ ಬಿಟ್ಟು ಸಮುದಾಯದ ಗೆಲುವಿಗೆ ಆದ್ಯತೆ : ಸತ್ಯಜಿತ್ ಸುರತ್ಕಲ್

ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ

ಪದ್ಮರಾಜ್ ಅವರು ಕಾಂಗ್ರೆಸ್ ಪಕ್ಷದ ಎಲ್ಲರ ಒಮ್ಮತದ ಅಭ್ಯರ್ಥಿ : ಮಾಜಿ ಸಚಿವ ರಮಾನಾಥ ರೈ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ

ನವಮಂಗಳೂರು ಬಂದರಿಗೆ ‘ಸೆವೆನ್ ಸೀಸ್ ಮರೈನರ್’ ಹಡಗು ಆಗಮನ

ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 6ನೇ ಹಾಗೂ 2023-24ನೇ ಆರ್ಥಿಕ ವರ್ಷದ ಕೊನೆಯ ಕ್ರೂಝ್  ‘ಸೆವೆನ್ ಸೀಸ್ ಮರೈನರ್’ನ್ನು ಬರಮಾಡಿಕೊಂಡಿತು. ಸೆವೆನ್ ಸೀಸ್ ಮರೈನರ್ 610 ಪ್ರಯಾಣಿಕರು ಮತ್ತು 440 ಸಿಬ್ಬಂದಿಯನ್ನು ಹೊತ್ತು ಮಂಗಳೂರಿಗೆ ಆಗಮಿಸಿದ್ದು, ಪ್ರವಾಸಿಗರಿಗೆ ನವ ಮಂಗಳೂರು ಬಂದರಿನ ಹಡಗು ತಂಗುದಾಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣಗಳು, ದೇವಾಲಯ, ಮಾರುಕಟ್ಟೆ ಮತ್ತು ಅಂಗಡಿಗಳಿಗೆ ತೆರಳಲು