Home ಕರಾವಳಿ Archive by category ಸುರತ್ಕಲ್

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ

ಮೇ 9ರಂದು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

ಶಿಬರೂರು ಕ್ಷೇತ್ರದಲ್ಲಿ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ

ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು. ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗುತು ಮನೆಯವರು, ವಿವಿಧ ಉಪಸಮಿತಿಗಳ

ದ.ಕ ದಲ್ಲಿ ಮತದಾನಕ್ಕೆ ಎಲ್ಲಾ ಸಿದ್ಧತೆ ಪೂರ್ಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ

ಸುರತ್ಕಲ್ ವ್ಯಾಪ್ತಿಯಲ್ಲಿ ಪದ್ಮರಾಜ್ ಆರ್ ರೋಡ್ ಶೋ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಮುಕ್ಕ ಶ್ರೀರಾಮ ಭಜನಾ ಮಂದಿರದಿಂದ ಆರಂಭವಾದ ರೋಡ್ ಶೋ ಮುಕ್ಕ ಮಸ್ಜಿದ್, ಮುಕ್ಕ ಸ್ಯಾಕ್ರೆಡ್ ಹಾರ್ಟ್ ಚರ್ಚ್, ಮುಕ್ಕ ಭಂಡಾರ ಮನೆಗೆ ಭೇಟಿ, ಕಾಟಿಪಳ್ಳ ಜಂಕ್ಷನ್‌ನಲ್ಲಿ ಸಭೆ

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿ

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆ ಪಥಸಂಚಲನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.

ಎರ್ಮಾಳಿನ ಅಕ್ರಮ ಕೋಳಿಯಂಕಕ್ಕೆ ದಾಳಿ : ಒಂಭತ್ತು ಮಂದಿ ವಶಕ್ಕೆ

ಎರ್ಮಾಳಿನ ಬಾರೊಂದರ ಹಿಂಬದಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಒಂಭತ್ತು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಪೊಲೀಸ್ ವಶದಲ್ಲಿರುವವರು ಸುರೇಂದ್ರ ಬೆಳಪು, ಮಹೇಶ್ ಕುರ್ಕಾಲು, ಗಣೇಶ್ ಶೆಟ್ಟಿ ಎಲ್ಲೂರು, ಉಮೇಶ್ ಪೂಜಾರಿ ಕಾಪು, ಶ್ರೀಕಾಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ರಾಜೇಂದ್ರ ಎಲ್ಲೂರು, ರಾಮ ತೆಂಕ ಎರ್ಮಾಳು, ಯೋಗೀಶ್ ಶೆಟ್ಟಿ ಕುಂಜೂರು.ಎರ್ಮಾಳಿನ ಬಾರ್ ಹಿಂಭಾಗದಲ್ಲಿ ಅಕ್ರಮ ಕೋಳಿಯಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.