Home Archive by category ಕರಾವಳಿ (Page 3)

ಉಳ್ಳಾಲ ಬೀಚ್‌ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ ಬೀಚ್‌ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ

ಮಂಗಳೂರು: ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನಿ ಬೃಹತ್ ಮಾರಾಟ ಮೇಳ” ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಶುಭಾರಂಭಗೊಂಡಿತು. ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ಅವರು ದೀಪ

ಕುದುರೆ ಗ್ರಂಥಿಯಿಂದ ಬೆದರಿಕೆ || V4News

ಬೆಂಗಳೂರಿನ ಕುದುರೆಗಳಲ್ಲಿ ಗ್ಲಾಂಡರ್ಸ್ ಎಂಬ ಗ್ರಂಥಿ ರೋಗವು ಪತ್ತೆಯಾಗಿದ್ದು, ಅದು ಸಾಂಕ್ರಾಮಿಕವಾಗಿ ಹರಡುವ ಭೀತಿ ಎಲ್ಲೆಡೆ ಹಬ್ಬಿದೆ. ಇದು ಸದ್ಯ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕುದುರೆಗಳಲ್ಲಿ ಕಂಡುಬಂದಿದೆ. ಸದ್ಯಕ್ಕೆ ಯಾವುದೇ ಮಾನವರಲ್ಲಿ ಈ ರೋಗ ಪತ್ತೆಯಾಗಿಲ್ಲವಾದರೂ ಮನುಷ್ಯರಲ್ಲಿ ಹರಡಬಹುದು ಎನ್ನುವ ಭೀತಿಯಂತೂ ಇದೆ. ಲೋಕದ ಮನುಷ್ಯರು ಇನ್ನೂ ಕೋವಿಡ್ ಸೋಂಕು ರೋಗದಿಂದ ಹೊರ ಬಂದಿಲ್ಲ ಎಂದೇ ಹೇಳಲಾಗಿದೆ. ಆದರೆ ಇಂದು ಜನಸಾಮಾನ್ಯರು ಕೋವಿಡ್ ಭಯದಿಂದ

ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು

ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.

ಕರಾವಳಿ ಯಾವತ್ತೂ ಭಾಗದಲ್ಲಿ ಜಾತಿ ರಾಜಕಾರಣ ನಡೆಯುದಿಲ್ಲ : ಗುರ್ಮೆ ಸುರೇಶ್ ಶೆಟ್ಟಿ

ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ

ದೇರಳಕಟ್ಟೆ : ಸ್ವೀಟ್ ಕಾರ್ನ್ ಸ್ಟಾಲ್‌ನಲ್ಲಿ ಗ್ಯಾಸ್ ಸಿಡಿದು ಬೆಂಕಿ

ದೇರಳಕಟ್ಟೆ : ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಬಶೀರ್ ಎಂಬವರು ವ್ಯವಹಾರದಲ್ಲಿ ತೊಡಗಿದ್ದ ಸಂದರ್ಭ ಗ್ಯಾಸ್ ಸೋರಿಕೆ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಲ್ಲಿದ್ದ ಗ್ರಾಹಕರು ಹಾಗೂ ಸ್ಟಾಲ್ ಮಾಲೀಕರು ಓಡಿ ಪಾರಾಗಿದ್ದಾರೆ. ಬೆಂಕಿ ತೀವ್ರಗೊಂಡಿದ್ದು, ಸಾರ್ವಜನಿಕರು ಹೊಯ್ಗೆ, ನೀರು ಹಾಯಿಸಿ ಬೆಂಕಿ ನಂದಿಸಲು

ವಿಶ್ವ ಲಿವರ್ ದಿನಾಚರಣೆ

ಯಕೃತ್ತು ನಮ್ಮ ದೇಹದ ಎರಡನೇ ಅತಿ ದೊಡ್ಡ ಅಂಗ. ಚರ್ಮ ನಮ್ಮ ದೇಹದ ಅತಿ ದೊಡ್ಡ ಅಂಗವಾಗಿದ್ದು ದೇಹದ ರಕ್ಷಣೆಯ ಪ್ರಥಮ ಅಂಗವಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದು ಯಕೃತ್ತು ಇದ್ದು, ದೇಹದ ತೂಕಕ್ಕನುಗುಣವಾಗಿ 2 ರಿಂದ 2.5 ಕಿಲೋ.ಗ್ರಾಂನಷ್ಟು ತೂಕವಿರುತ್ತದೆ. ನಮ್ಮ ದೇಹದ ಅತಿ ಅವಿಬಾಜ್ಯ ಅಂಗವಾಗಿರುವ ಈ ಯಕೃತ್ತುನ್ನು ‘ಲಿವರ್’ ಎಂದೂ ಆಂಗ್ಲ ಭಾಷೆಯಲ್ಲಿ ಕರೆಯುತ್ತಾರೆ. ನಮ್ಮ ದೇಹದ ಎಲ್ಲಾ ರಕ್ಷಣಾಕಾರ್ಯ, ಪಚನಕಾರ್ಯ, ಜೀರ್ಣ ಪ್ರಕ್ರಿಯೆ, ರಕ್ತ

ಮೂಡುಬಿದಿರೆ: ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ ಇದರ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ದಿನಾಂಕ 18/04/2024 ರಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಾಚಲಪತಿ, ಪೋಲಿಸ್ ನಿರೀಕ್ಷಕರಾದ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್‌ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ಬಳಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 108