Home Archive by category ರಾಜಕೀಯ

ಮುಂಬೈ: NDA ಸರ್ಕಾರ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲ – ರಮಾನಾಥ ರೈ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್‌ನಲ್ಲಿ

ರಘುಪತಿ ಭಟ್ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ : ಸುನಿಲ್ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಪಕ್ಷೇತರಾಗಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದು, ಅವರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುನೀಲ್ ಕುಮಾರ್ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆಯನ್ನು ರಘುಪತಿ ಭಟ್ ವ್ಯಕ್ತಪಡಿಸಿದ್ದಾರೆ. ದುಡುಕಿನ ತೀರ್ಮಾನ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಈ ಹಿಂದೆ

ಮಾಜಿ ಶಾಸಕ ರಘುಪತಿ ಭಟ್ ಗೆ ಕೈ ತಪ್ಪಿದ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ : ಪಕ್ಷೇತರವಾಗಿ ಸ್ಪರ್ಧೆಗೆ ನಿರ್ಧಾರ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಡುಪಿ ಕರಂಬಳ್ಳಿಯ ಸ್ವಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘುಪತಿ ಭಟ್ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ ಆಗಬೇಕಾದುದು ಈಗಿನ ಅಗತ್ಯ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಮೋದಿಯವರಿಗಾಗಲಿ,

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಸಂತಾಪ

ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ,

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ

ಬೈಂದೂರು ಸುರ್ಕುಂದ ವಾರ್ಡ್‍ನಲ್ಲಿ ಬಿರುಸಿನ ಪ್ರಚಾರ

ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ ಮತ ಪ್ರಚಾರವನ್ನು ಮಾಡಲಾಯಿತು.ಕಾರ್ಯಕರ್ತರು ಬಿರು ಬಿಸಿಲನ್ನು ಲೆಕ್ಕಿಸದೆ ಪ್ರಚಾರದ ಕಾರ್ಯದಲ್ಲಿ

ಒಂದಾದರೂ ಸತ್ಯ ಹೇಳಿ ಮೋದಿಯವರೆ- ಮುಖ್ಯಮಂತ್ರಿ

ಒಂದಾದರೂ ಸತ್ಯ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ಆಳುವವರ ಸುಳ್ಳನ್ನು ಬಯಲು ಮಾಡುವುದು ಬುದ್ಧಿಜೀವಿಗಳ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಡಿ. ವೈ. ಚಂದ್ರಚೂಡ್ ಕಳೆದ ವರುಷ ಹೇಳಿದ್ದರು. ಸರಕಾರಗಳು ಸುಳ್ಳು ಮತ್ತು ಸುಳ್ಳು ಸುದ್ದಿಗಳ ವಿರುದ್ಧ ಕಾವಲುಗಾರ ಆಗಿ ನಿಲ್ಲಬೇಕು ಎಂದೂ ಅವರು ಹೇಳಿದರು.ಪ್ರಜಾಪ್ರಭುತ್ವ ಮತ್ತು ಸತ್ಯ ಕೈ ಕೈ ಹಿಡಿದು ಸಾಗಬೇಕು. ಆದರೆ ನಿರಂಕುಶವಾದಿ