Home Archive by category ರಾಜ್ಯ

ಕೊಡಗು : SSLC ವಿದ್ಯಾರ್ಥಿನಿಯ ಕೊಲೆ ಪ್ರಕರಣ – ಆರೋಪಿಯ ಬಂಧನ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ

ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ ಆಗಬೇಕಾದುದು ಈಗಿನ ಅಗತ್ಯ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಮೋದಿಯವರಿಗಾಗಲಿ,

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ; ಕೃಷಿ ನಾಶ

ಕೊಕ್ಕಡದ ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ. ವರದಿ: ಪ್ರಶಾಂತ್ ನೆಲ್ಯಾಡಿ

ಮೇ 9ರಂದು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ

ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣ; ಬಿಜೆಪಿಯವರದೇ ದೊಡ್ಡ ಕಿತಾಪತಿ; ಮಾಜೀ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಿಜೆಪಿಯ ಒಂದಿಬ್ಬರ ಕೈವಾಡವಿದೆ ಎಂದು ಮಾಜೀ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಗಂಭೀರ ಆರೋಪ ಮಾಡಿದರು.ಬಿಜೆಪಿಗೆ ಹಾಸನದಲ್ಲಿ ಸ್ಥಳವಿಲ್ಲ ಮತ್ತು ಗೆಲುವು ಅಸಾಧ್ಯ ಎಂದು ತಿಳಿದ ಬಳಿಕ ಮಾಜೀ ಪ್ರಧಾನಿ ದೇವೇಗೌಡರ ಕುಟುಂಬದ ಹೆಸರನ್ನು ಕೆಡಿಸಲು ಈ ಸಂಚು ಮಾಡಲಾಗಿದೆ. ಪೆನ್ ಡ್ರಯ್ವ್ ತಯಾರಿಸಿ ಹಂಚುವ ಮೂಲಕ ದೇವೇಗೌಡರ ಕುಟುಂಬಕ್ಕೆ ಕಳಂಕ ಹಚ್ಚಲು ಭಾರೀ ತೆರೆಯ ಮರೆಯ ಸಂಚು ನಡೆದಿದೆ ಎಂದು

ಒಂದಾದರೂ ಸತ್ಯ ಹೇಳಿ ಮೋದಿಯವರೆ- ಮುಖ್ಯಮಂತ್ರಿ

ಒಂದಾದರೂ ಸತ್ಯ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ಆಳುವವರ ಸುಳ್ಳನ್ನು ಬಯಲು ಮಾಡುವುದು ಬುದ್ಧಿಜೀವಿಗಳ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಡಿ. ವೈ. ಚಂದ್ರಚೂಡ್ ಕಳೆದ ವರುಷ ಹೇಳಿದ್ದರು. ಸರಕಾರಗಳು ಸುಳ್ಳು ಮತ್ತು ಸುಳ್ಳು ಸುದ್ದಿಗಳ ವಿರುದ್ಧ ಕಾವಲುಗಾರ ಆಗಿ ನಿಲ್ಲಬೇಕು ಎಂದೂ ಅವರು ಹೇಳಿದರು.ಪ್ರಜಾಪ್ರಭುತ್ವ ಮತ್ತು ಸತ್ಯ ಕೈ ಕೈ ಹಿಡಿದು ಸಾಗಬೇಕು. ಆದರೆ ನಿರಂಕುಶವಾದಿ

ಹಾಸನದ ಸಂತ್ರಸ್ತೆಯರು ಹಿಂದೂ ಹೆಣ್ಣು ಮಕ್ಕಳಲ್ಲವೆ? ಕೂಡಲೆ ಬಂಧಿಸಿ ಕರೆತನ್ನಿ- ಕಾಂಗ್ರೆಸ್ ಪಕ್ಷದ ಒತ್ತಾಯ

ಸಂಸದ ಪ್ರಜ್ವಲ್ ರೇವಣ್ಣರಿಂದ ಶೋಷಿತರಾದ ಹೆಣ್ಣುಮಕ್ಕಳು ಹಿಂದೂಗಳಲ್ಲವೆ? ವಿದೇಶಕ್ಕೆ ಪರಾರಿಯಾಗಲು ಬಿಜೆಪಿ ನೆರವು ನೀಡಿದ್ದೇಕೆ ಎಂದಿತ್ಯಾದಿಯಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ಸಿನವರು ಪ್ರಶ್ನಿಸಿದರು. ಹೆಣ ಇಟ್ಟು ರಾಜಕೀಯ ಮಾಡುವ, ಹಿಂದೂ ಶಬ್ದದ ರಾಜಕೀಯ ಮಾಡುವ ಬಿಜೆಪಿಯವರಿಗೆ ಹಾಸನದಲ್ಲಿ ಅವರ ಮೈತ್ರಿ ಸಂಸದರಿಂದ ಅನ್ಯಾಯಕ್ಕೆ ಒಳಗಾದವರು ಹಿಂದೂ ಹೆಣ್ಣುಮಕ್ಕಳು ಎಂದು ತಿಳಿದಿಲ್ಲವೆ ಎಂದು ಪ್ರಶ್ನಿಸಿದರು. ಪ್ರಜ್ವಲ್ ರೇವಣ್ಣ ವಿದೇಶಕ್ಕೆ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ  35,162 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ