Home Posts tagged #bantwala (Page 4)

ವಿಟ್ಲ: ಶಾಲಾ ಬಸ್ ಮತ್ತು ಬೈಕ್

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ.

ಬಂಟ್ವಾಳ: ನೆಚ್ಚಿನ ಶಿಕ್ಷಕಿಗೆ ನಿವೃತ್ತಿ ಸಂದರ್ಭ ಬಂಗಾರದ ಮಾಲೆ ನೀಡಿದ ಹಳೆ ವಿದ್ಯಾರ್ಥಿಗಳು

ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ ಆರ್. ಭಟ್ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ

ಸಂಗಬೆಟ್ಟು: ಸಾರ್ವಜನಿಕ ರಸ್ತೆ ಸಂಚಾರಕ್ಕೆ ತಡೆ

ಬಂಟ್ವಾಳ: ಸಾರ್ವಜನಿಕ ರಸ್ತೆಗೆ ತಡೆವೊಡ್ಡಿದ ಪ್ರಕರಣವೊಂದು ಸಂಗಬೆಟ್ಟು ಗ್ರಾಮದಲ್ಲಿ ನಡೆದಿದ್ದು ಆರೋಪಿತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪರಿಸರದ ನಿವಾಸಿಗಳು ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಡಿ ಪಲ್ಕೆ ಮುಗೇರು ಎಂಬಲ್ಲಿ ನೂರಾರು ವರ್ಷಗಳ ಕಾಲದಿಂದ ಸಾರ್ವಜನಿಕರು, ಶಾಲಾ ಮಕ್ಕಳು, ನಿತ್ಯ ವ್ಯವಹಾರ ವಹಿವಾಟುಗಳಿಗೆ ಹೋಗುವವರು, ಸ್ಥಳೀಯ ವಿಷ್ಣುಮೂರ್ತಿ ದೇವಸ್ಥಾನಕ್ಕೆ

*ಬಂಟ್ವಾಳ: ತುಂಬೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತುಂಬೆ ನೇತ್ರಾವತಿ ನದಿ ತೀರದಲ್ಲಿ ಸುಮಾರು ೫ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಗೊಂಡಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.೧೩ರಿಂದ ೨೩ರವರೆಗೆ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಧ್ವಜಸ್ತಂಭ ಪ್ರತಿಷ್ಠೆ ಸಹಿತ ವಾರ್ಷಿಕ ಜಾತ್ರಾ ಮಹೋತ್ಸವವು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹೇಳಿದರು.

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ- ಆರು ಮಂದಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ

ಬಂಟ್ವಾಳ: ಲಯನ್ಸ್ ಪ್ರಾಂತೀಯ ಸಮ್ಮಿಲನ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಮಾತನಾಡಿ ಸಮ್ಮಿಲನದ ಯಶಸ್ಸಿಗೆ ಸಹಕಾರ ಕೋರಿದರು. ಸಮ್ಮಿಲನ

ಬಂಟ್ವಾಳ: ಸಂಗಬೆಟ್ಟು ಬಾಕಿಮಾರು ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ಕಟ್ಟದ ಶಿಲಾನ್ಯಾಸ ಕಾರ್ಯಕ್ರಮವು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರ ಉಪಸ್ಥಿತಿಯಲ್ಲಿ ಇತ್ತೀಚಿಗೆ ಜರಗಿತು. ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕರಾದ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು.ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಸಿದ್ದಕಟ್ಟೆಹಾಲು ಉತ್ಪಾದಕ ಸಹಕಾರಿ

ಬಂಟ್ವಾಳ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದು ಸ್ವೀಕರಿಸಿದರು. ತಾಲೂಕು ಬಂಟರ

ಬಂಟ್ವಾಳ: ಮನೆಯೊಂದಕ್ಕೆ ನುಗ್ಗಿ ನಗ, ನಗದು ದರೋಡೆ

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಮಾತ್ರ ಇದ್ದು ಇದ್ದು, ಕಪಾಟಿನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ

ವಿಟ್ಲ: ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್ ಹೇಳಿದರು.ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.13ರಂದು ಬೆಳಗ್ಗೆ 9 ಗಂಟೆಗೆ