Home Posts tagged #putturu (Page 2)

ಪುತ್ತೂರು: ಅ.22ರಂದು ಪುತ್ತೂರುದ ಪಿಲಿಗೊಬ್ಬು -2023 ಹಾಗೂ ಫುಡ್ ಫೆಸ್ಟ್

ಪುತ್ತೂರು: ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅ. 22ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು -2023 ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರುದ ಪಿಲಿಗೊಬ್ಬು ಸಮಿತಿಯ

ಪುತ್ತೂರು: ಅ.22ರಂದು ಪುತ್ತೂರುದ ಪಿಲಿರಂಗ್‍ನ ಸೀಸನ್ -2

ಪುತ್ತೂರು: ಹುಲಿ ಕುಣಿತದಂತಹ ಸಾಂಸ್ಕೃತಿಕ ಕಲೆ ನಮ್ಮ ಊರಿಗೂ ಬರಲಿ ಎಂಬ ಉದ್ದೇಶದಿಂದ ಆರಂಭಗೊಂಡಿರುವ ಪುತ್ತೂರುದ ಪಿಲಿರಂಗ್‍ನ ಸೀಸನ್ -2 ಪುತ್ತೂರು ಕಿಲ್ಲೆ ಮೈದಾನದಲ್ಲಿ ಅ. 22ರಂದು ನಡೆಯಲಿದೆ ಎಂದು ಪಿಲಿರಂಗ್ ಸಾರಥ್ಯ ವಹಿಸಿರುವ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪುತ್ತೂರಿಗೆ ಹೆಸರು ಬರಬೇಕು ಎಂಬ ನಿಟ್ಟಿನಲ್ಲಿ ಪಿಲಿರಂಗ್ ಆರಂಭ ಮಾಡಿದ್ದೇವೆ. ಜಾತ್ಯಾತೀತ, ಪಕ್ಷಾತೀತ

ಪುತ್ತೂರು: ಅ.15ರಿಂದ 26ರ ವರೆಗೆ ದಸರಾ ಮಹೋತ್ಸವ

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ `ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ

ಪುತ್ತೂರು: ಕರುವನ್ನು ಕೊಂದು ರಬ್ಬರ್ ಮರದ ಕೊಂಬೆಯಲ್ಲಿ ನೇತು ಹಾಕಿದ ಚಿರತೆ…!

ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ

ಪುತ್ತೂರು: ಶಿವಮೊಗ್ಗ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಲಿ, ವಿಹಿಂಪ, ಬಜರಂಗದಳ ಆಗ್ರಹ

ಪುತ್ತೂರು: ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ನಡೆದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ವಿಹಿಂಪ, ಬಜರಂಗದಳ ಆಗ್ರಹಿಸಿದೆ. ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಸುದ್ದಿಗೋಷ್ಠಿಯಲ್ಲಿ ಖಂಡನೆ ವ್ಯಕ್ತಪಡಿಸಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್‍ಗಳನ್ನು ಪೆÇಲೀಸರು ತೆಗೆಸಿದ್ದಾರೆ. ಇದನ್ನು

ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ.7 ರಂದು ಸಂಜೆ ಪುತ್ತೂರಿನ ಕಿಲ್ಲೇ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ

ಪುತ್ತೂರು: ಮದ್ಯದಂಗಡಿ ತೆರೆಯುವುದು ಬಿಟ್ಟು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಿ, ನಶ್ರೀಯಾ ಬೆಳ್ಳಾರೆ

ಪುತ್ತೂರು: ರಾಜ್ಯ ಸರಕಾರ 1 ಸಾವಿರ ಮದ್ಯಂಗಡಿ ತೆರೆಯುವ ಮೂಲಕ ಗಾಂಧಿ ತತ್ವಕ್ಕೆ ವಿರೋಧವಾಗಿ ನಡೆಯುತ್ತಿದೆ ಮತ್ತು ಮದ್ಯದಂಗಡಿ ಹೆಚ್ಚಿಸಿ ಗಾಂಧಿ ಜಯಂತಿ ಆಚರಿಸುತ್ತಿದೆ ಎಂದು ಆರೋಪಿಸಿ ಎಸ್‍ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ವುಮೆನ್ಸ್ ಇಂಡಿಯಾ ಮೂವುಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಶ್ರೀಯಾ ಬೆಳ್ಳಾರೆ ಅವರು ಮಾತನಾಡಿ, ರಾಜ್ಯ ಸರಕಾರ ಗ್ಯಾರೆಂಟಿ ಸರಿದೂಗಿಸಲು ಮದ್ಯಪಾನ

ಪುತ್ತೂರು: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಪ್ರಕರಣ, ಆರು ಮಂದಿ ಆರೋಪಿಗಳ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಮನೆ ಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಿದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ದರೋಡೆ ನಡೆಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ. ಅವರು ಪುತ್ತೂರು ಎಎಸ್‍ಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರಕರಣವನ್ನು ಭೇದಿಸಿದ ಬಗ್ಗೆ

ಪುತ್ತೂರು : ಬೆಂಕಿ, ಹರಿತವಾದ ಆಯುಧ ಬಳಸಿ ತಾಲೀಮು ಪ್ರದರ್ಶನ

ಪುತ್ತೂರು : ಆಧುನಿಕ ಫಿಟ್ನೆಸ್ ಸೆಂಟರ್‍ಗಳ ಭರಾಟೆಯ ನಡುವೆಯೂ, ಪ್ರಾಚೀನ, ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದೆ. ವ್ಯಾಯಾಮಗಳಿಗೆ, ದೇಹದಾಢ್ರ್ಯ ಪ್ರದರ್ಶನದ ಜೊತೆಗೆ ವ್ಯಾಯಾಮ ಶಾಲೆಗಳು ಆಕರ್ಷಕ ಹಾಗು ಸಾಹಸಮಯ ಪ್ರದರ್ಶನಕ್ಕೂ ಹೆಸರುವಾಸಿಯಾಗಿವೆ. ಪುತ್ತೂರಿನ ಉದಯ ಕುಮಾರ್ ಈಗಲೂ ತಾಲೀಮು ತರಬೇತಿಯನ್ನು ನೀಡುತ್ತಿದ್ದಾರೆ. ತಾಲೀಮಿನಲ್ಲಿ ಸುಮಾರು 42 ಪ್ರಕಾರದ ತಾಲೀಮು ಪ್ರದರ್ಶನಗಳಿದ್ದು, ಸಿಂಗಲ್ ಬಾಣ, ಡಬಲ್

ಪುತ್ತೂರು: ಅಪರೂಪದ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆ

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆಯಾಗಿದೆ. ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಹಾವನ್ನು ರಕ್ಷಿಸಿ ಮತ್ತೆ ಅದರ ವಾಸಸ್ಥಾನವಾದ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಎಂದು ಕರೆಯಲಾಗುವ ಈ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ