Home Posts tagged #v4news karnataka (Page 22)

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಕಾಂಕ್ರೀಟ್‌ನಿಂದ ಕೂಡಿದೆ. ಈ ರಸ್ತೆಗೆ ವಿವಿಧ ಹಂತದಲ್ಲಿ ಸರಕಾರದಿಂದ

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ

ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಂದ ಅನುದಾನ ಬಿಡುಗಡೆಗೆ ಹಣದ ಬೇಡಿಕೆ: ಗುಲಾಂ ಮುಹಮ್ಮದ್ ಆರೋಪ

ಉಡುಪಿ ಜಿಲ್ಲೆಯ ವಕ್ಫ್ ಸಲಹಾ ಸಮಿತಿಯು ಮಸೀದಿಗಳ ಅನುದಾನ ಬಿಡುಗಡೆಗೆ ಶೇ. 20 ರಷ್ಟು ಮುಂಗಡವಾಗಿ ನಗದು ರೂಪದಲ್ಲಿ ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಉಪಾಧ್ಯಕ್ಷ ಗುಲಾಂ ಮುಹಮ್ಮದ್ ಹೆಜಮಾಡಿ ಆರೋಪಿಸಿದ್ದಾರೆ.ಕಾಪು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಕ್ಫ್ ಸಲಹಾ ಸಮಿತಿಯು ಜಿಲ್ಲೆಯಲ್ಲಿರುವ ಮಸೀದಿಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಚಿಂತನೆ ನಡೆಸುವ ಮೂಲಕ

ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿ ಉದ್ಘಾಟನೆ

ಮಂಗಳೂರಿನ ಪಿವಿಎಸ್ ಬಳಿಯ ಮಾನಸ ಟವರ್ಸ್‍ನ ನಾಲ್ಕನೇ ಮಹಡಿಯಲ್ಲಿ ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯ ಶುಭಾರಂಭಗೊಂಡಿತು. ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪೆÇ್ರ| ಡಾ| ಶಾಂತರಾಮ ಶೆಟ್ಟಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಮಂಗಳೂರು ಕೇವಲ 5ಲಕ್ಷ ಜನ ಸಂಖ್ಯೆಯಿರುವ ನಗರವಾಗಿದ್ದು, ಬ್ಯಾಂಕಿಂಗ್, ಶಿಕ್ಷಣ, ಆರೋಗ್ಯ ಕ್ಷೇತ್ರ, ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ

ರಾಜ್ಯ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಲು ಸವಾಕ್ ಒತ್ತಾಯ

ರಾಜ್ಯದ ಕಲಾವಿದರನ್ನು ಉಳಿಸಿ ಬೆಳಸುವ ಉದ್ದೇಶದಿಂದ ಕರ್ನಾಟಕ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸ್ಟೇಜ್ ಆರ್ಟಿಸ್ಟ್ ಆಂಡ್ ವರ್ಕಸ್ ಅಸೋಸಿಯೇಷನ್‌ ಆಫ್‌ ಕರ್ನಾಟಕ (SAWAK) ಸರಕಾರವನ್ನು ಒತ್ತಾಯಿಸಿದೆ. ನಾಡಿನ ಕಲಾವಿದರ ಕಲಾಭಿವೃದ್ಧಿ ಮತ್ತು ಕ್ಷೇಮಾಭಿವೃದ್ಧಿ ಸರಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಸುಮಾರು 56 ವಿವಿಧ ಕಲೆಗಳಿದ್ದು ಅದಕ್ಕೆ ಸಂಬಂಧಿಸಿದಂತೆ ಕಲಾವಿದರೂ ಇದ್ದಾರೆ. ಇವರೆಲ್ಲ ಸಂರಕ್ಷಣೆಯನ್ನು ಸರಕಾರ ಮಾಡಬೇಕಾಗಿದೆ.

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರ : ಸಿಎಂ ಬೊಮ್ಮಯಿ

7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ಸೇವೆ ಬಂದ್

ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್‌ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ನಾಳೆ ಯಾವ ಇಲಾಖೆ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ; ಏನೇ ಕ್ರಮ ಕೈಗೊಂಡರೂ ಎದುರಿಸಲು ಸಿದ್ಧ. ಆಯೋಗ ವರದಿ ಜಾರಿಯಾದರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು. ಒಂದುವೇಳೆ ಎಸ್ಮಾ

ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿಗಾಗಿ ಹಣ ಮೀಸಲಿಟ್ಟಿದ್ದೇವೆ : ಸಿಎಂ ಬೊಮ್ಮಯಿ

7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, “ಈ ವರ್ಷದ ಬಜೆಟ್‌ನಲ್ಲಿ ನಾವು 7ನೇ ವೇತನ ಆಯೋಗದ ವರದಿಗಾಗಿಯೇ ಹಣ ಮೀಸಲಿಟ್ಟಿದ್ದೇವೆ. ಆಯೋಗದ ಮಧ್ಯಂತರ ವರದಿ ಪಡೆದುಕೊಂಡ ನಂತರ ಅದನ್ನು ಅನುಷ್ಠಾನ ಮಾಡುತ್ತೇವೆ” ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಜಾರಿಗೆ

ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ”ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ “

ಪುತ್ತೂರು : ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ “ಪೂವರಿ” ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ಜರಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಡಕೊಂಡಿದೆ. ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು