Home Posts tagged #v4news karnataka (Page 7)

ನಾಗೂರಿನ ಶ್ರೀ ವೀರ ಹನುಮಾನ್ ದೇವಸ್ಥಾನ, ಶ್ರೀ ಶನೇಶ್ವರ ಸ್ವಾಮಿ ದೇವಳ : ಹನುಮ ಜಯಂತಿ

ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗೂರಿನ ಶ್ರೀ ವೀರ ಹನುಮಾನ್ ದೇವಸ್ಥಾನ ಮತ್ತು ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾ.30ರ ಶ್ರೀ ರಾಮನವಮಿಯಂದು ಪ್ರಾರಂಭಗೊಂಡು, ಏಪ್ರಿಲ್ 6ರ ವರೆಗೆ ಹನುಮಾನ್ ಜಯಂತಿ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಭ್ರದಿಂದ ನಡೆಯಿತು. ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು

ಏ.8ರಂದು ಪಣಪಿಲದಲ್ಲಿ ಜಯ ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,

ಮೂಡುಬಿದಿರೆ : ಪೊಲೀಸರಿಂದ ಪಥ ಸಂಚಲನ

ಮೂಡುಬಿದಿರೆ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಬಳಿಯಿಂದ ಮೂಡುಬಿದಿರೆ ಕನ್ನಡ ಭವನದವರೆಗೆ ಗುರುವಾರ ಸಂಜೆ ಪೊಲೀಸ ರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 80 ಜನ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಯ

ಹಿರಿಯ ದೈವ ಪಾತ್ರಿ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್,

ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ

ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಅವರು ಎ.7 ರಂದು ಸ್ವಗೃಹದಲ್ಲಿ ನಿಧನರಾದರು. ದೇವಪ್ಪ ನೋಂಡಾ(74ವರ್ಷ)ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ :ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹ

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆಯನ್ನು

ಬೆಳ್ತಂಗಡಿ : ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ

ಮರೋಡಿ ಗ್ರಾಮದ ಮಾಜಿ ಪಂಚಾಯತ್ ಉಪಾಧ್ಯಕ್ಷರು ಬಿಜೆಪಿಯ ಮುಖಂಡರು ರವಿರಾಜ್ ಬಲ್ಲಾಳ್ ಬಿಜೆಪಿಯ ದುರಡಳಿತಕ್ಕೆ ಬೇಸತ್ತು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃದಲ್ಲಿ ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ನಾರವಿ ಗ್ರಾಮದ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಕಳ ವಿಧಾನ ಸಭಾ ಕ್ಷೇತ್ರ : ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಮಮತಾ ಹೆಗ್ಡೆ ದಿಲ್ಲಿ ಭೇಟಿ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ

ಅವ್ಯವಸ್ಥೆಯ ಆಗರದಲ್ಲಿ ಸುರತ್ಕಲ್ ಮೀನು ಮಾರುಕಟ್ಟೆ, ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ

ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ ಮೀನುಗಾರಿಗೆ ತಾತ್ಕಾಲಿಕ ಮಾರುಕಟ್ಟೆಯ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ವರ್ಷ ನಾಲ್ಕು ಕಳೆದರೂ,

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ : 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ವಿಜ್ರಂಭಣೆಯಿಂದ ನಡೆಯಿತು. ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ 108 ತೆಂಗಿನಕಾಯಿಯ ಗಣಯಾಗ, ಮೂಡಪ್ಪ ಸೇವೆ ಹಾಗೂ ರಂಗ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಶ್ರೀ ದೇವರನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.